ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರತಿಭಾ ಕಾರಂಜಿ ಮಕ್ಕಳ ಬೆಳವಣಿಗೆಗೆ ವೇದಿಕೆ’

Last Updated 29 ನವೆಂಬರ್ 2019, 13:17 IST
ಅಕ್ಷರ ಗಾತ್ರ

ಹೊಸಪೇಟೆ: ‘ಪ್ರತಿಭಾ ಕಾರಂಜಿ ಕಾರ್ಯಕ್ರಮದಿಂದ ಮಕ್ಕಳಲ್ಲಿ ಅಡಗಿರುವ ಜ್ಞಾನ ಹೊರ ಜಗತ್ತಿಗೆ ತೋರಿಸಲು ಇರುವ ಉತ್ತಮ ವೇದಿಕೆಯಾಗಿದೆ’ ಎಂದು ಉಪವಿಭಾಗಾಧಿಕಾರಿ ಶೇಖ್‌ ತನ್ವೀರ್‌ ಆಸಿಫ್‌ ಹೇಳಿದರು.

ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದ ಅವರು, ‘ಒಂದೊಂದು ಮಗುವಿನಲ್ಲಿ ಒಂದೊಂದು ರೀತಿಯ ಜ್ಞಾನ, ಕಲೆ ಇರುತ್ತದೆ. ಅದನ್ನು ತೋರಿಸಲೆಂದೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ರೂಪಿಸಲಾಗಿದೆ’ ಎಂದರು.

‘ಮಕ್ಕಳು ಕೇವಲ ಪಠ್ಯಕ್ಕಷ್ಟೇ ಸೀಮಿತರಾಗಬಾರದು. ಅವರಲ್ಲಿರುವ ವಿಭಿನ್ನವಾದ ಜ್ಞಾನ, ಕೌಶಲ ತೋರಿಸಲು ಇದು ಉತ್ತಮ ಅವಕಾಶ. ಅದರ ಪ್ರಯೋಜನ ಪಡೆದು ಮುಂದೆ ಬರಬೇಕು’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕುಮಾರ, ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌.ಡಿ. ಜೋಶಿ, ಡಿ.ವೈ.ಎಸ್ಪಿ. ವಿ. ರಘುಕುಮಾರ, ಕ್ಷೇತ್ರ ಸಮನ್ವಯಾಧಿಕಾರಿ ಗುರುರಾಜ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಸಣ್ಣ ವೀರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್‌, ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ ಜತ್ತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಾಂಡುರಂಗ ನಿಕ್ಕಂ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್‌ ಸದಸ್ಯ ಎಸ್‌. ಬಸವರಾಜ, ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಕಡ್ಲಿ ವೀರಭದ್ರೇಶ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಮಾರ್ಗದಪ್ಪ, ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ. ವೆಂಕಟೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT