ಬಳ್ಳಾರಿ: ಹತ್ತೇ ದಿನಕ್ಕೆ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೊಟ್ ವರ್ಗಾವಣೆ

ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತೆಯಾಗಿ ನ.13 ರಂದು ಅಧಿಕಾರ ಸ್ವೀಕರಿಸಿದ್ದ 2016ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೊಟ್ ಅವರನ್ನು ಹತ್ತೇ ದಿನದಲ್ಲಿ ಸರ್ಕಾರ ವರ್ಗಾವಣೆ ಮಾಡಿದೆ.
ಕಾರವಾರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನೆ ಸಂಸ್ಥೆಯ ಆಡಳಿತಾಧಿಕಾರಿಯಾಗಿದ್ದ ಕೆಎಎಸ್ ಕಿರಿಯ ಶ್ರೇಣಿ ಎನ್. ಮಹೇಶಬಾಬು ಅವರನ್ನು ಪಾಲಿಕೆಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಬಿದ್ದಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ಗೆಹ್ಲೋಟ್ ಅವರನ್ನು ವರ್ಗಾಯಿಸಿ ಹೊರಡಿಸಿದ್ದ ಆದೇಶವನ್ನು ರದ್ದು ಪಡಿಸಿ ಪಾಲಿಕೆಗೆ ವರ್ಗಾಯಿಸಲಾಗಿತ್ತು.
ಪಾಲಿಕೆ ಆಯುಕ್ತರ ಹುದ್ದೆಯನ್ನು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ಸರಿಸಮಾನವಾಗಿ ಮೇಲ್ದರ್ಜೆಗೆ ಏರಿಸಿ ವರ್ಗಾವಣೆ ಆದೇಶ ಹೊರಡಿಸಲಾಗಿತ್ತು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.