ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್‌ಗಳ ಆರಂಭಕ್ಕೆ ಸಿದ್ಧತೆಗೆ ಸೂಚನೆ:

ಪ್ರತಿ ಹಾಸ್ಟೆಲ್‍ಗೂ ಹೈ ಸ್ಪೀಡ್ ವೈಫೈ–ಅಧಿಕಾರಿಗಳ ಸಭೆಯಲ್ಲಿ ಸೂಚನೆ
Last Updated 6 ನವೆಂಬರ್ 2020, 17:00 IST
ಅಕ್ಷರ ಗಾತ್ರ

ಹರಪನಹಳ್ಳಿ: ‘ರಾಜ್ಯದಾದ್ಯಂತ ಹಾಸ್ಟೆಲ್‍ಗಳನ್ನು ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಪ್ರತಿ ಹಾಸ್ಟೆಲ್‍ನಲ್ಲೂ ಹೈ ಸ್ಪೀಡ್‍ ಇರುವ ವೈಫೈ ಅಳವಡಿಸಲು ಅಧಿಕಾರಿಗಳ ಸಭೆಯಲ್ಲಿ ಸೂಚಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಪಟ್ಟಣದ ಕೋಡಿಹಳ್ಳಿ ಭೀಮಪ್ಪ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಮೆಟ್ರಿಕ್ ನಂತರದ ಹಾಸ್ಟೆಲ್‍ನಲ್ಲಿರುವ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ 50ರಷ್ಟು ಕಡಿತಗೊಳಿಸಿ, ವಸತಿ ವ್ಯವಸ್ಥೆ ಕಲ್ಪಿಸಬೇಕು. ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು. ಉಳಿದವರು ತಮ್ಮ ಮನೆಯಲ್ಲಿಯೇ ಇದ್ದು ಆನ್‍ಲೈನ್‍ ಪಾಠ ಕೇಳಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿಲಯಾರ್ಥಿಗಳಿಗೆ ಟ್ಯಾಬ್ ಅಥವಾ ಮೊಬೈಲ್ ಕೊಡುವ ಬಗ್ಗೆ ಚರ್ಚೆ ನಡೆದಿದ್ದು, ಇನ್ನೂ ತೀರ್ಮಾನವಾಗಿಲ್ಲ’ ಎಂದು ಹೇಳಿದರು.

‘ಪ್ರತಿ ಹಾಸ್ಟೆಲ್‍ನಲ್ಲೂ ಐಸೋಲೇಷನ್‍ ವಾರ್ಡ್, ಆಮ್ಲಜನಕದ ವ್ಯವಸ್ಥೆ ಮಾಡಲು ಆದೇಶಿಸಲಾಗಿದೆ. ಪ್ರತಿ ತಾಲ್ಲೂಕಿನಲ್ಲಿರುವ ಕೋವಿಡ್‍ ನೋಡಲ್ ಅಧಿಕಾರಿಗಳ ಮಾರ್ಗದರ್ಶನ ಪಡೆದು, ಎಸ್‍ಒಪಿ ನಿಯಮಾನುಸಾರವೇ ಎಲ್ಲವೂ ನಡೆಯುತ್ತವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT