ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಾರಂ 3 ಅರ್ಜಿ ವಿಳಂಬ ವಿರೋಧಿಸಿ ಪ್ರತಿಭಟನೆ

Last Updated 4 ಅಕ್ಟೋಬರ್ 2018, 12:05 IST
ಅಕ್ಷರ ಗಾತ್ರ

ಹೊಸಪೇಟೆ: ನಗರಸಭೆಯಲ್ಲಿ ಫಾರಂ ಸಂಖ್ಯೆ 3ರ ಅರ್ಜಿ ಕೊಡಲು ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಗುರುವಾರ ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಉಪವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ‘ಸಿರಿವಂತರು ಹೋದರೆ ತಕ್ಷಣವೇ ಫಾರಂ 3 ಅರ್ಜಿ ಕೊಡಲಾಗುತ್ತದೆ. ಬಡವರು ತಿಂಗಳುಗಟ್ಟಲೇ ಓಡಾಡಿದರೂ ಕೊಡುತ್ತಿಲ್ಲ. ಕೆಲವು ಭ್ರಷ್ಟ ಅಧಿಕಾರಿಗಳಿಂದ ಹೀಗಾಗುತ್ತಿದ್ದು, ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದರು.

‘ಈ ಕುರಿತು ನಗರಸಭೆ ಅಧ್ಯಕ್ಷ ಗುಜ್ಜಲ್‌ ನಿಂಗಪ್ಪ, ಪೌರಾಯುಕ್ತ ವಿ. ರಮೇಶ ಅವರೊಂದಿಗೆ ಮಾತನಾಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಳಿಕವಷ್ಟೇ ಫಾರಂ 3ರ ಅರ್ಜಿ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಕನಿಷ್ಠ ಅದರಂತೆ ನಡೆದುಕೊಳ್ಳಬೇಕು. ಸಾರ್ವಜನಿಕರು ನಿತ್ಯ ಕಚೇರಿಗೆ ಅಲೆಯುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ನಗರಸಭೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ವೇದಿಕೆಯ ತಾಲ್ಲೂಕು ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಎನ್‌.ಎಚ್‌. ಶ್ರೀನಿವಾಸ, ನಗರ ಘಟಕದ ಅಧ್ಯಕ್ಷ ಎಸ್‌.ಎಂ. ಜಾಫರ್‌, ಪದಾಧಿಕಾರಿಗಳಾದ ಅಮರೇಶಪ್ಪ, ಫಯಾಜ್‌, ಜೆ. ಮಂಜುನಾಥ್‌, ಮೊಹಮ್ಮದ್‌ ಬಾಷಾ, ಅಮೀರ್‌, ಹಮೀದ್‌, ಅಮ್ಮನಗೌಡ್ರು, ರಾಜ, ಫಿರೋಜ್‌, ಬಲದೇವ್‌, ಅನಿಲ್‌, ರಾಜು, ಸುಮಾ, ಸುವರ್ಣ, ಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT