ಶನಿವಾರ, ಜೂನ್ 25, 2022
28 °C

ಇಂಧನ ದರ ಏರಿಕೆ: ಸಿಪಿಎಂ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುರುಗೋಡು: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆ ಖಂಡಿಸಿ ಸಿಪಿಎಂ ತಾಲ್ಲೂಕು ಘಟಕದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ವಿ.ಎಸ್. ಶಿವಶಂಕರ್ ಮಾತನಾಡಿ, ‘ಚುನಾವಣೆ ಪೂರ್ವದಲ್ಲಿ ಜನಸಾಮಾನ್ಯರಿಗೆ ಕೈಗೆಟುಕುವ ರೀತಿಯಲ್ಲಿ ಅಗತ್ಯ ವಸ್ತುಗಳ ದರ ನಿಗದಿ ಮಾಡುವುದಾಗಿ ಅಧಿಕಾರಕ್ಕೆ ಬಂದ ಬಿಜೆಪಿಯ ನಿಜ ಬಣ್ಣಈಗ ಬಯಲಾಗಿದೆ’ ಎಂದು ಆರೋಪಿಸಿದರು.

‘ಬಿತ್ತನೆ ಸಮಯದಲ್ಲಿ ಇಂಧನ ದರ ಏರಿಕೆ ಮಾಡಿರುವುದು ರೈತರಿಗೆ ನುಂಗಲಾರದ ತುತ್ತಾಗಿದೆ. ಕೂಡಲೆ ದರ ನಿಯಂತ್ರಿಸಬೇಕು’ ಎಂದು ಒತ್ತಾಯಿಸಿದರು.

ಬಾದನಹಟ್ಟಿ ವರದಿ: ತಾಲ್ಲೂಕಿನ ಬಾದನಹಟ್ಟಿ ಸಿಪಿಎಂ ಗ್ರಾಮ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಗಾಳಿ ಬಸವರಾಜ, ಎಚ್.ಯಂಕಮ್ಮ, ಎಚ್.ಮಲ್ಲಿಕಾರ್ಜುನ, ಮಮ್ಮದ್, ಹುಲೆಪ್ಪ, ಲಕ್ಷ್ಮಣ, ಚಂದ್ರಪ್ಪ, ಲಿಂಗಪ್ಪ, ಬೆಟ್ಟಪ್ಪ, ಪೊಂಪಣ್ಣ, ಕರಿಬಸಪ್ಪ, ಗುರುಬಸಪ್ಪ, ಮತ್ತು ಹಂಡಿಜೋಗಿ ಹನುಮಂತಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು