ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿಗೆ ಮುತ್ತಿಗೆ

ಸಾಮೂಹಿಕ ಶೌಚಾಲಯ ನಿರ್ಮಿಸಲು ಆಗ್ರಹ
Last Updated 16 ಸೆಪ್ಟೆಂಬರ್ 2021, 4:35 IST
ಅಕ್ಷರ ಗಾತ್ರ

ಕುರುಗೋಡು: ಇಲ್ಲಿಗೆ ಸಮೀಪದ ಸಿರಿಗೇರಿ ಗ್ರಾಮದ 4ನೇ ವಾರ್ಡಿನಲ್ಲಿ ಮಹಿಳೆಯರಿಗೆ ಸಾಮೂಹಿಕ ಶೌಚಾಲಯ ನಿರ್ಮಿಸಿಕೊಡುವಂತೆ ಒತ್ತಾಯಿಸಿ ಮಹಿಳೆಯರು ಬುಧವಾರ ಗ್ರಾಮ ಪಂಚಾಯಿತಿಗೆ ಮುತ್ತಿಗೆಹಾಕಿ ಪ್ರತಿಭಟಿಸಿದರು.

4ನೇ ವಾರ್ಡ್‍ನಲ್ಲಿ ಈ ಮೊದಲು ನಿರ್ಮಿಸಿದ್ದ ಮಹಿಳೆಯರ ಸಾಮೂಹಿಕ ಶೌಚಾಲಯ ಖಾಸಗಿ ವ್ಯಕ್ತಿಗೆ ಸೇರಿದ ಸ್ಥಳದಲ್ಲಿದೆ ಎಂದು ತೆರವು
ಗೊಳಿಸಲಾಗಿದೆ. ಇದರಿಂದ ಮನೆಯಲ್ಲಿ ವೈಯಕ್ತಿಕ ಶೌಚಾಲಯವಿಲ್ಲದ ಮಹಿಳೆಯರಿಗೆ ತೊಂದರೆಯಾಗಿದೆ. ಕೂಡಲೇ ತಾತ್ಕಾಲಿಕವಾಗಿ ಸಾಮೂಹಿಕ ಶೌಚಾಲಯ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪಿಡಿಒ ರಾಜೇಶ್ವರಿ ಮಾತನಾಡಿ, ಸ್ವಚ್ಛಭಾರತ ಅಭಿಯಾನ ಯೋಜನೆ ಜಾರಿಯಾದ ನಂತರ ಸಾಮೂಹಿಕ ಶೌಚಾಲಯ ನಿರ್ಮಾಣಕ್ಕೆ ಸರ್ಕಾರ ಅವಕಾಶ ನೀಡಿಲ್ಲ. ಈ ಹಿಂದೆ ನಿರ್ಮಿಸಿದ್ದ ಹಳೆಯ ಶೌಚಾಲಯಗಳನ್ನು ತೆರವುಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದರು.

ತಾತ್ಕಾಲಿಕ ಸಾಮೂಹಿಕ ಶೌಚಾಲಯ ನಿರ್ಮಿಸಬೇಕೆಂದು ಮಹಿಳೆಯರು ಪಟ್ಟು ಹಿಡಿದರು. ಪಿಡಿಒ ಮೂರುದಿನಗಳಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು. ಗ್ರಾ.ಪಂ ಅಧ್ಯಕ್ಷೆ ಎಸ್.ಸುಜಾತ ಕುಮಾರಸ್ವಾಮಿ, ಉಪಾಧ್ಯಕ್ಷೆ ವಿ.ದಾನಮ್ಮಮುದಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT