ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ: ನ್ಯಾಯಾಧೀಶರ ವಜಾಕ್ಕೆ ಆಗ್ರಹ

Last Updated 7 ಫೆಬ್ರುವರಿ 2022, 13:07 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಅವಮಾನಿಸಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘ ಮತ್ತು ಡಾ. ಬಾಬು ಜಗಜೀವನ್‌ರಾಂ ಜನಜಾಗೃತಿ ವೇದಿಕೆ ಆಗ್ರಹಿಸಿದೆ.

ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಪದಾಧಿಕಾರಿಗಳು ಬಳಿಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಮುಖಂಡ ಎಚ್.ಆರ್.ಉದಯ್ ಕುಮಾರ್ ಇಂಗಳಗಿ ಮಾತನಾಡಿ, ‘ಮಲ್ಲಿಕಾರ್ಜುನ ಗೌಡ ಮೂಲತಃ ಅಂಬೇಡ್ಕರ್ ಮತ್ತು ತಳಸಮುದಾಯದ ಬಗ್ಗೆ ಪೂರ್ವಗ್ರಹ ಪೀಡಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಹಲವಾರು ತೀರ್ಪುಗಳನ್ನು ನೀಡಿರುತ್ತಾರೆ. ಇವುಗಳಲ್ಲಿ ತಳಸಮುದಾಯಗಳಿಗೆ ಅನ್ಯಾಯ ಆಗಿರುವುದು ಕಂಡುಬರುತ್ತದೆ. ಅವರ ಸೇವಾ ಅವಧಿಯಲ್ಲಿ ಅವರು ನೀಡಿದ ಎಲ್ಲ ತೀರ್ಪುಗಳನ್ನು ಮರುಪರಿಶೀಲಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಎಚ್.ನಾಗರಾಜ್, ಎಚ್.ಎಸ್.ವೆಂಕಪ್ಪ, ಕೊಟಗಿಹಾಳ್ ಮಲ್ಲಿಕಾರ್ಜುನ, ಸಿ.ಆರ್.ಭರತ್‌ಕುಮಾರ್, ಜಿ.ಪಿ.ತಾಯಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT