ಭಾನುವಾರ, ಏಪ್ರಿಲ್ 2, 2023
23 °C

ಹೊಸಪೇಟೆ: ಅಕ್ಷರ ದಾಸೋಹ ನೌಕರರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಅಕ್ಷರ ದಾಸೋಹ ನೌಕರರಿಗೆ ಏಪ್ರಿಲ್‌ನಿಂದ ಶಾಲೆ ಆರಂಭವಾಗುವವರೆಗೆ ಪರಿಹಾರ ಧನ ನೀಡಬೇಕೆಂದು ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ತಾಲ್ಲೂಕು ಸಮಿತಿಯವರು ಗುರುವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ಉಪ ತಹಶೀಲ್ದಾರ್‌ ಅಮರನಾಥ ಅವರಿಗೆ ಸಲ್ಲಿಸಿದರು.

‘ರಾಜ್ಯದಲ್ಲಿ 1.18 ಲಕ್ಷ ಮಹಿಳೆಯರು ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತುದ್ದಾರೆ. ಎಲ್ಲರೂ ದುರ್ಬಲ ವರ್ಗಕ್ಕೆ ಸೇರಿದವರಿದ್ದಾರೆ. ನಿತ್ಯದ ದುಡಿಮೆ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ. ಲಾಕ್‌ಡೌನ್‌ನಿಂದ ಶಾಲೆಗಳು ಮುಚ್ಚಿವೆ. ಆದರೆ, ಮಕ್ಕಳ ಮನೆಗೆ ಆಹಾರ ಧಾನ್ಯ ತಲುಪಿಸುವ ಕೆಲಸ ಮಾಡಿದ್ದಾರೆ. ಅವರ ಕೆಲಸಕ್ಕೆ ಹೆಚ್ಚುವರಿ ಭತ್ಯೆ ನೀಡಿಲ್ಲ. ಏಪ್ರಿಲ್‌ನಿಂದ ಜಾರಿಗೆ ಬರುವಂತೆ ಪರಿಹಾರ ಧನ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಅಕ್ಷರ ದಾಸೋಹ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರವೇಶ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕು. ಉಚಿತ ಆರೋಗ್ಯ ಸೌಲಭ್ಯ ಒದಗಿಸಬೇಕು. ಎಲ್ಲರ ಸೇವೆ ಕಾಯಂಗೊಳಿಸಿ, ಪಿಂಚಣಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸಂಘದ ತಾಲ್ಲೂಕು ಅಧ್ಯಕ್ಷೆ ಎಚ್‌. ಯಶೋದಮ್ಮ, ಕಾರ್ಯದರ್ಶಿ ಕೆ. ನಾಗರತ್ನಮ್ಮ, ಖಜಾಂಚಿ ಸಿ.ವೈ. ಸೌಮ್ಯ, ವಿಜಯಮ್ಮ ಸೇರಿದಂತೆ ಮೊದಲಾದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು