ಶನಿವಾರ, ಏಪ್ರಿಲ್ 17, 2021
23 °C

ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ನಗರ ಹೊರವಲಯದ ಜಂಬುನಾಥ ಗುಡ್ಡ ಬಳಿಯಿರುವ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಜೇಶನ್‌ (ಎಐಡಿಎಸ್‍ಒ) ಕಾರ್ಯಕರ್ತರು ಬುಧವಾರ ನಗರದ ಕೇಂದ್ರ ಬಸ್‌ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.

ನಂತರ ಈಶಾನ್ಯ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.

ಜಂಬುನಾಥ ಗುಡ್ಡ ಹಾಸ್ಟೆಲ್‌ನಲ್ಲಿ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಅನೇಕರು ನಗರದ ವಿಜಯನಗರ ಕಾಲೇಜು, ಶಂಕರ್‌ ಆನಂದ್‌ ಸಿಂಗ್‌, ಪ್ರೌಢದೇವರಾಯ ತಾಂತ್ರಿಕ ಕಾಲೇಜು, ಸಪ್ತಗಿರಿ ಪ್ಯಾರಾ ಮೆಡಿಕಲ್‌, ನರ್ಸಿಂಗ್‌ ಕಾಲೇಜಿನಲ್ಲಿ ಓದುತ್ತಾರೆ. ಆದರೆ, ಸಮಯಕ್ಕೆ ಸರಿಯಾಗಿ ಬಸ್‌ ವ್ಯವಸ್ಥೆ ಇಲ್ಲದ ಕಾರಣ ಅವರ ಓದಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಂಬುನಾಥ ಗುಡ್ಡದ ಬಳಿಯೇ ಆದರ್ಶ ಪ್ರೌಢಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೌಲಾನಾ ಆಜಾದ್‌ ರೆಸಿಡೆನ್ಷಿಯಲ್‌ ಶಾಲೆ ಇದೆ. ಬೆಳಿಗ್ಗೆ ಏಳು ಗಂಟೆಯಿಂದ ನಿರಂತರವಾಗಿ ಬಸ್‌ಗಳನ್ನು ಓಡಿಸಿದರೆ ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯ ಜೆ.ಪಿ. ರವಿಕಿರಣ್‌, ಜೆ.ಎಚ್.ನಾಗರಾಜ್, ಸೋಮಪ್ಪ, ಗಣೇಶ್, ಸುದೀಪ್, ನವೀನ್, ಯಲ್ಲಾಲಿಂಗ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು