ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿಗಾಗಿ ಖಾಲಿ ಕೊಡಗಳೊಂದಿಗೆ ಪ್ರತಿಭಟನೆ

Last Updated 10 ಜುಲೈ 2019, 12:31 IST
ಅಕ್ಷರ ಗಾತ್ರ

ಹೊಸಪೇಟೆ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರದ 35ನೇ ವಾರ್ಡ್‌ ವ್ಯಾಪ್ತಿಯ ಪಾರ್ವತಿ ನಗರದ ಮಹಿಳೆಯರು ಬುಧವಾರ ಇಲ್ಲಿನ ನಗರಸಭೆ ಕಚೇರಿ ಎದುರು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು.

ನಂತರ ನಗರಸಭೆ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.

‘ಪಾರ್ವತಿ ನಗರದಲ್ಲಿ ಕುಡಿಯುವ ನೀರಿಗೆ ಬಹಳ ಸಮಸ್ಯೆ ಇದೆ. ನಿತ್ಯ ಎಲ್ಲ ಕೆಲಸ ಬಿಟ್ಟು ಜನ ನೀರಿಗಾಗಿ ಎಲ್ಲೆಲ್ಲೊ ಅಲೆದಾಡುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ನಗರಸಭೆಯ ವಾಲ್‌ಮೆನ್‌ ನೀರು ಹರಿಸುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ.ಈ ಕುರಿತು ಹಲವು ಸಲ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿದರು.

‘ತುಂಗಭದ್ರಾ ಜಲಾಶಯ ಸಮೀಪದಲ್ಲೇ ಇದ್ದರೂ ನೀರಿಗಾಗಿ ಪರದಾಡುವಂತಹ ಸ್ಥಿತಿ ಇದೆ. ಮೇಲಿನ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಪಾರ್ವತಿ ನಗರದಲ್ಲಿ ಸೃಷ್ಟಿಯಾಗಿರುವ ಸಮಸ್ಯೆ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT