ಶುಕ್ರವಾರ, ಮೇ 27, 2022
30 °C

ಹೊಸಪೇಟೆ: ಮೂರನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯಿಂದ ನಗರದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಬುಧವಾರ ಮೂರನೇ ದಿನಕ್ಕೆ ಕಾಲಿರಿಸಿತು. ಪ್ರತಿಭಟನಾಕಾರರು ಸಂಜೆ ಮದಕರಿ ನಾಯಕ ವೃತ್ತದಲ್ಲಿ ರಸ್ತೆತಡೆ ಚಳವಳಿ ನಡೆಸಿದರು.

ಧರಣಿಯನ್ನು ಬೆಂಬಲಿಸಿ ಅದರಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಜೆ.ಎನ್.ಗಣೇಶ್, ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹೆಚ್ಚಿಸಬೇಕೆಂದು ಆಗ್ರಹಿಸಿ ಹರಿಹರದ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಹಲವು ದಿನಗಳಿಂದ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದಾರೆ. ನಾನು ಕೂಡ ಅವರನ್ನು ಬೆಂಬಲಿಸಿ ಪಾಲ್ಗೊಂಡಿದ್ದೆ. ಇಲ್ಲಿ ನಡೆಸುತ್ತಿರುವ ಧರಣಿಗೂ ನನ್ನ ಬೆಂಬಲವಿದೆ ಎಂದು ತಿಳಿಸಿದರು.

ಇದು, ನಿನ್ನೆ ಮೊನ್ನೆಯ ಬೇಡಿಕೆಯಲ್ಲ. ಹಲವು ವರ್ಷಗಳ ಬೇಡಿಕೆ. ರಾಜ್ಯ ಸರ್ಕಾರ ಕಾಲಹರಣ ಮಾಡದೇ ನ್ಯಾಯಯುತ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.

ಬೆಳಗಾವಿಯ ಗುತ್ತಿಗೆದಾರರ ಸಂತೋಷ್‌ ಪಾಟೀಲ ಅವರ ಸಾವಿಗೆ ಸಂಬಂಧಿಸಿದಂತೆ ಅವರ ಕುಟುಂಬದವರೇ ನೇರವಾಗಿ ಸಚಿವ ಈಶ್ವರಪ್ಪನವರ ವಿರುದ್ಧ ಆರೋಪ ಮಾಡಿರುವುದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು