ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್‌ನಲ್ಲಿ ಪಡಿತರ ಅಕ್ಕಿ ಅನ್ನ: ವಿರೋಧ

Last Updated 23 ಜುಲೈ 2019, 19:30 IST
ಅಕ್ಷರ ಗಾತ್ರ

ಬಳ್ಳಾರಿ: ‘ನಗರದಲ್ಲಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್‌ ಪೂರ್ವ ಮತ್ತು ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸೋನಾಮಸೂರಿ ಅಕ್ಕಿಯ ಅನ್ನ ನೀಡದೆ ನ್ಯಾಯಬೆಲೆ ಅಂಗಡಿ ಅಕ್ಕಿಯ ಅನ್ನವನ್ನು ಬಡಿಸಲಾಗುತ್ತಿದೆ. ಮೊಟ್ಟೆ, ಮಾಂಸದಂಥ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ನೀಡುತ್ತಿಲ್ಲ. ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದೆ’ ಎಂದು ದೂರಿ ನೂರಾರು ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಧರಣಿ ನಡೆಸಿದರು.

‘ನಗರದ ಬಂಡಿಹಟ್ಟಿ ಮತ್ತು ಕೌಲ್‌ಬಜಾರ್‌ನಲ್ಲಿರುವ ವಿದ್ಯಾರ್ಥಿನಿಲಯಗಳಲ್ಲಿ ಈ ಮುಂಚೆ ನೀಡುತ್ತಿದ್ದ ಉತ್ತಮ ಗುಣಮಟ್ಟದ ಅನ್ನವನ್ನೇ ನೀಡಬೇಕು. ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು. ವಾರ್ಡನ್‌ಗಳನ್ನು ನಿಯೋಜಿಸಬೇಕು.ಶೌಚಾಲಯಗಳನ್ನು ದುರಸ್ತಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಸೌಕರ್ಯಗಳನ್ನು ಕಲ್ಪಿಸಲು ಕೋರಿ ಹಲವು ಬಾರಿ ಮನವಿಗಳನ್ನು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ವಾರ್ಡನ್‌ಗಳು, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದಲೇ ಧರಣಿಯನ್ನು ಹಮ್ಮಿಕೊಳ್ಳಬೇಕಾಯಿತು’ ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT