ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 11ರಂದು ಪುರಂದರದಾಸರ ಆರಾಧನಾ ಉತ್ಸವ

Last Updated 4 ಫೆಬ್ರುವರಿ 2021, 14:24 IST
ಅಕ್ಷರ ಗಾತ್ರ

ಹೊಸಪೇಟೆ: ಪುರಂದರದಾಸರ ಆರಾಧನಾ ಉತ್ಸವ ಫೆ. 11ರಂದು ಕೋವಿಡ್‌ ಮಾರ್ಗಸೂಚಿ ಪ್ರಕಾರ ಆಚರಿಸಲು ತೀರ್ಮಾನಿಸಲಾಗಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್‌. ಮಂಜುನಾಥ ಅಧ್ಯಕ್ಷತೆಯಲ್ಲಿ ಗುರುವಾರ ನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.

‘ಉತ್ಸವದ ಪ್ರಯುಕ್ತ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕಲಾವಿದರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ವೇದಿಕೆ ನಿರ್ಮಿಸಲಾಗುವುದು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪುರಂದರದಾಸರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಆನೆ ಲಕ್ಷ್ಮಿ ಸೇರಿದಂತೆ ಇತರೆ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ’ ಎಂದು ಮಂಜುನಾಥ ತಿಳಿಸಿದರು.

‘ಪುರಂದರ ಮಂಟಪದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್ ಚಾಲನೆ ಕೊಡುವರು. ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದ್ದು, ಎಲ್ಲರೂ ಅದನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕು’ ಎಂದು ಹೇಳಿದರು.

ಬಳ್ಳಾರಿ ಉಪವಿಭಾಗಾಧಿಕಾರಿ ರಮೇಶ ಕೋನರೆಡ್ಡಿ, ಹೊಸಪೇಟೆ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT