ಎರಡನೇ ಹಂತದ ಬೆಳೆ ನಷ್ಟ ಸಮೀಕ್ಷೆ ಆರಂಭ: ಆರ್. ಅಶೋಕ್

ಹೊಸಪೇಟೆ: ‘ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜ್ಯದ ನಾನಾ ಭಾಗಗಳಲ್ಲಿ ನೆರೆ ಬಂದು ಅಪಾರ ಬೆಳೆ ನಷ್ಟವಾಗಿದೆ. ಈಗ ಎರಡನೇ ಹಂತದ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ಪರಿಹಾರ ವಿತರಿಸಲಾಗುವುದು’ ಎಂದು ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದರು.
ಗುರುವಾರ ಇಲ್ಲಿನ ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಮೊದಲನೇ ಹಂತದ ಸಮೀಕ್ಷೆ ಪೂರ್ಣಗೊಂಡಿದ್ದು, ಕೇಂದ್ರ ಸರ್ಕಾರವು ₹395 ಕೋಟಿ ಪರಿಹಾರ ನೀಡಿದೆ.ಎರಡನೇ ಹಂತದ ಸಮೀಕ್ಷೆ ಪೂರ್ಣಗೊಳಿಸಿ, ಸಮಸ್ಯೆಯ ಸುಳಿಗೆ ಸಿಲುಕಿದವರಿಗೆ ಪರಿಹಾರ ವಿತರಿಸಲಾಗುವುದು’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.