ಬುಧವಾರ, ಆಗಸ್ಟ್ 10, 2022
24 °C

ಎರಡನೇ ದಿನವೂ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಶುಕ್ರವಾರ ಸತತ ಎರಡನೇ ದಿನವೂ ಮಳೆಯಾಗಿದೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೆಲನಿಮಿಷ ವರ್ಷಧಾರೆಯಾಯಿತು. ಅನಂತರ ಬಿಡುವು ಕೊಟ್ಟು, ಮಧ್ಯಾಹ್ನ 3.30ರಿಂದ ಸಂಜೆ 5ರ ವರೆಗೆ ಬಿರುಸಿನ ಮಳೆಯಾಯಿತು. ತಾಲ್ಲೂಕಿನ ಹಂಪಿ, ಕಮಲಾಪುರ, ಧರ್ಮದಗುಡ್ಡ, ಕಾಳಘಟ್ಟ, ನಾಗೇನಹಳ್ಳಿ, ಬಸವನದುರ್ಗ, ಹೊಸೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಗುರುವಾರವೂ ಮೂರ್ನಾಲ್ಕು ಗಂಟೆ ಮಳೆಯಾಗಿತ್ತು. ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಮಳೆಯಿಲ್ಲದೆ ಆತಂಕಗೊಂಡಿದ್ದ ರೈತರ ಮೊಗದಲ್ಲಿ ಹರ್ಷ ಮೂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.