ಸೋಮವಾರ, ಏಪ್ರಿಲ್ 19, 2021
32 °C

ಹೊಸಪೇಟೆಯಲ್ಲಿ ಜಿಟಿಜಿಟಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಮಂಗಳವಾರ ಜಿಟಿಜಿಟಿ ಮಳೆಯಾಯಿತು.

ಮಧ್ಯಾಹ್ನ ಮೂರು ಗಂಟೆಗೆ ಕೆಲಸಮಯ ಸುರಿದ ಮಳೆ ಬಿಡುವು ಪಡೆದುಕೊಂಡಿತು. ಸಂಜೆ ನಾಲ್ಕೂವರೆ ಸುಮಾರಿಗೆ ಪುನಃ ಆರಂಭಗೊಂಡಿತು.

ಹಲವು ದಿನಗಳಿಂದ ಮೋಡ ಕವಿದ ವಾತಾವರಣ ಇರುತ್ತಿದೆ. ಆದರೆ, ಮಳೆಯಾಗಿಲ್ಲ. ಮಂಗಳವಾರ ಏಕಾಏಕಿ ಮಳೆಯಾಗಿದ್ದರಿಂದ ವಾತಾವರಣ ಸಂಪೂರ್ಣ ತಂಪಾಗಿತ್ತು. ಜಿಟಿಜಿಟಿ ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ಜನರ ಓಡಾಟ ವಿರಳವಾಗಿತ್ತು. 

ತಾಲ್ಲೂಕಿನ ಹೊಸೂರು, 88 ಮುದ್ಲಾಪುರ, ಬಸವನದುರ್ಗ, ನಾಗೇನಹಳ್ಳಿ, ಕೊಂಡನಾಯಕನಹಳ್ಳಿ, ಮಲಪನಗುಡಿ, ಹೊಸ ಮಲಪನಗುಡಿ, ಕಮಲಾಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು