ಭಾನುವಾರ, ಸೆಪ್ಟೆಂಬರ್ 20, 2020
22 °C

ತಾಲ್ಲೂಕಿನಾದ್ಯಂತ ಬಿರುಸಿನ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಬುಧವಾರ ಮಧ್ಯಾಹ್ನ ಬಿರುಸಿನ ಮಳೆಯಾಯಿತು.

ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಆವರಿಸಿಕೊಂಡಿತ್ತು. ಮಧ್ಯಾಹ್ನ ಏಕಾಏಕಿ ಬಿರುಸಿನ ಮಳೆ ಸುರಿಯಿತು. ಜೋರಾಗಿ ಮಳೆ ಸುರಿದ ಕಾರಣ ದೈನಂದಿನ ಕೆಲಸಕ್ಕೆ ಹೋಗುವವರು ರಸ್ತೆಬದಿಯ ಮಳಿಗೆಗಳಲ್ಲಿ ಕಾದು ನಿಲ್ಲಬೇಕಾಯಿತು. ಕೆಲಸಮಯ ವಾಹನ ಹಾಗೂ ಜನ ಸಂಚಾರ ನಿಂತು ಹೋಗಿತ್ತು.

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ವ್ಯಾಸನಕೆರೆ, ಸಂಕ್ಲಾಪುರ, ವಡ್ಡರಹಳ್ಳಿ, ಸೀತಾರಾಮ ತಾಂಡಾ, ಕೊಂಡನಾಯಕನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು