ಗುರುವಾರ , ಮೇ 13, 2021
22 °C

ರಾಮನವಮಿ; ದೇಗುಲದಲ್ಲಿ ಭಕ್ತರು ವಿರಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ನಗರದ ರಾಣಿಪೇಟೆಯ ಶ್ರೀರಾಮ ದೇವಸ್ಥಾನದಲ್ಲಿ ಬುಧವಾರ ಶ್ರೀರಾಮ ನವಮಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು.

ದೇಗುಲದ ಗರ್ಭಗುಡಿಯಲ್ಲಿ ಶ್ರೀರಾಮಚಂದ್ರ, ಸೀತೆ, ಲಕ್ಷ್ಮಣ ಹಾಗೂ ಆಂಜನೇಯನಿಗೆ ವಿಶೇಷ ರೀತಿಯಲ್ಲಿ ಅಲಂಕರಿಸಿ, ಪೂಜೆ ನೆರವೇರಿಸಲಾಯಿತು. ಕೋವಿಡ್‌ ಕಾರಣದಿಂದ ಹೆಚ್ಚಿನ ಜನರನ್ನು ಸೇರಿಸದೆ ಸರಳವಾಗಿ ಧಾರ್ಮಿಕ ಕಾರ್ಯ ಪೂರ್ಣಗೊಳಿಸಲಾಯಿತು. ಬೆರಳೆಣಿಕೆಯ ಭಕ್ತರಷ್ಟೇ ಬಂದು ದೇವರ ದರ್ಶನ ಪಡೆದುಕೊಂಡು ಹಿಂತಿರುಗಿದರು. ದೇಗುಲದ ಹೊರಭಾಗದಲ್ಲಿ ಭಕ್ತರು, ಸಾರ್ವಜನಿಕರಿಗೆ ಪಾನಕ ವಿತರಿಸಲಾಯಿತು.

ವೀರಶೈವ ಲಿಂಗಾಯತ ಮಹಿಳಾ ಸಂಘಟನಾ ವೇದಿಕೆ:

ಸಂಘಟನೆಯಿಂದ ನಗರದ ಸಿದ್ಧಲಿಂಗಪ್ಪ ಚೌಕಿಯಲ್ಲಿ ಸರಳ ರೀತಿಯಲ್ಲಿ ರಾಮನವಮಿ ಆಚರಿಸಲಾಯಿತು. ಸಂಘಟನೆಯ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷೆ ಸುಮಾ ಸುರೇಶ್‌ ಮಾತನಾಡಿ, ‘ಕೊರೊನಾ ಮಹಾಮಾರಿಯಿಂದ ದೇಶ ಹೊರಬರಲು ಶ್ರೀರಾಮಚಂದ್ರ ಶಕ್ತಿ ಕೊಡಬೇಕು’ ಎಂದು ಹೇಳಿದರು.
ಮಲ್ಲಿಕಾರ್ಜುನ, ಚನ್ನಪ್ಪ, ರೂಪಿಯಾ ನಾಗರಾಜ್‌, ಮಂಜು ಇದ್ದರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು