ಬಿಜೆಪಿ ಅಭ್ಯರ್ಥಿ ಪರ ಶಾಸಕ ಶ್ರೀರಾಮುಲು ಪ್ರಚಾರ

ಬುಧವಾರ, ಏಪ್ರಿಲ್ 24, 2019
29 °C

ಬಿಜೆಪಿ ಅಭ್ಯರ್ಥಿ ಪರ ಶಾಸಕ ಶ್ರೀರಾಮುಲು ಪ್ರಚಾರ

Published:
Updated:
Prajavani

ಬಳ್ಳಾರಿ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರವಾಗಿ ಶಾಸಕ ಬಿ.ಶ್ರೀರಾಮುಲು ಗ್ರಾಮೀಣ ಭಾಗದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಂಗಳವಾರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.

ತಾಲ್ಲೂಕಿನ ಹಲಕುಂದಿ ಗ್ರಾಮದಲ್ಲಿ ರೋಡ್ ಷೋ ನಡೆಸಿದ ಶಾಸಕ ಶ್ರೀರಾಮುಲು ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅಭ್ಯರ್ಥಿಯನ್ನು ಗೆಲ್ಲಿಸಿ ಸಂಸತ್ತಿಗೆ ಕಳಿಸುವಂತೆ ಮನವಿ ಮಾಡಿಕೊಂಡರು. ನಂತರ ರೂಪನಗುಡಿ, ಪರಮ ದೇವನಹಳ್ಳಿ, ಮೋಕಾ ಹಾಗೂ ಸಂಗನಕಲ್ಲು ಮತ್ತು ಕೊಳಗಲ್ಲು ಗ್ರಾಮಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಅಧಿಕಾರದಿಂದ ಕ್ಷೇತ್ರ ಸಂಪೂರ್ಣವಾಗಿ ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.

ಶಾಸಕ ಶ್ರೀರಾಮುಲು ಜೊತೆ ಮಾಜಿ ಸಂಸದ ಸಣ್ಣ ಫಕೀರಪ್ಪ ಮತ್ತು ಸ್ಥಳಿಯ ಮುಖಂಡರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !