ಶುಕ್ರವಾರ, ಅಕ್ಟೋಬರ್ 23, 2020
28 °C

ಅತ್ಯಾಚಾರಿಗಳ ಪುರುಷತ್ವ ಹರಣ ಮಾಡಿ: ಅನುಪಮಾ ಶೆಣೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಳ್ಳಾರಿ: ‘ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿಗೆ ತರಬೇಕು’ ಎಂದು ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ'ದ ಸಂಸ್ಥಾಪಕ ಅಧ್ಯಕ್ಷೆ ಅನುಪಮಾ ಶೆಣೈ ಆಗ್ರಹಿಸಿದರು.

‘ಪುರುಷತ್ವ ಹರಣ ಶಿಕ್ಷೆಯು ಅತ್ಯಾಚಾರಿಗಳಿಗಷ್ಟೇ ಅಲ್ಲದೇ, ಅಂಥವರನ್ನು ಅನುಸರಿಸುವ ಆಲೋಚನೆಯುಳ್ಳವರಿಗೂ ಎಚ್ಚರಿಕೆಯ ಪಾಠವಾಗುತ್ತದೆ’ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಪಾದಿಸಿದರು.

‘ಹಾಥರಸ್‌ನ ಯುವತಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು. ನಿಷ್ಪಕ್ಷಪಾತ ತನಿಖೆ ನಡೆಸಿದರೆ ಮಾತ್ರ ಸಂತ್ರಸ್ತ ಯುವತಿಗೆ ಹಾಗೂ ಆಕೆಯ ಕುಟುಂಬದವರಿಗೆ ನ್ಯಾಯ ಸಿಗುತ್ತದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು