ಬುಧವಾರ, ಏಪ್ರಿಲ್ 21, 2021
32 °C

ಬಳ್ಳಾರಿ: ಪಡಿತರ ಅಕ್ಕಿ ಅಕ್ರಮ ಸಾಗಣೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೋರಣಗಲ್ಲು: ಇಲ್ಲಿನ ಜಿಂದಾಲ್ ಬೈಪಾಸ್ ರಸ್ತೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

₹ 52 ಸಾವಿರ ಮೌಲ್ಯದ 40 ಪಾಕೆಟ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡಿಯಲಾಗಿದೆ. ಈ ಸಂಬಂಧ ಬಳ್ಳಾರಿಯ ಮಿಲ್ಲರ್‍ಪೇಟೆಯ ಯುವರಾಜನನ್ನು ಬಂಧಿಸಲಾಗಿದೆ. ಅಕ್ಕಿ ಸಾಗಣೆಯ ಬಗ್ಗೆ ಖಚಿತ ಮಾಹಿತಿ ಪಡೆದ ತೋರಣಗಲ್ಲು ಠಾಣೆ ಪಿಎಸ್‍ಐ ಎ.ಕಾಳಿಂಗ ಮತ್ತು ಪೊಲೀಸರು, ಸಂಡೂರು ತಾಲ್ಲೂಕಿನ ಆಹಾರ ನಿರೀಕ್ಷಕ ರಾಘವೇಂದ್ರ ಅವರ ತಂಡ ಕಾರ್ಯಾಚರಣೆ ನಡೆಸಿದೆ ಆರೋಪಿಯನ್ನು ಬಂಧಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.