ಪ್ರಜಾವಾಣಿ ವರದಿ ಫಲಶ್ರುತಿ: ಟಿಪ್ಪರ್-ಟ್ರ್ಯಾಕ್ಟರ್ ವಶ, ಕಲ್ಲು ಕ್ವಾರಿಗೆ ತಡೆ

ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಸುತ್ತಮುತ್ತ ಅಕ್ರಮ ಕಲ್ಲು ಕ್ವಾರಿ ಗಣಿಕಾರಿಕೆ, ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ಭಾನುವಾರ ಬೆಳಿಗ್ಗೆ ತಹಶೀಲ್ದಾರ್ ಎಚ್. ವಿಶ್ವನಾಥ್ ನೇತೃತ್ವದ ತಂಡ ದಾಳಿ ನಡೆಸಿದೆ.
ದಾಳಿ ವೇಳೆ ನಾಲ್ಕು ಟ್ರ್ಯಾಕ್ಟರ್, ಒಂದು ಟಿಪ್ಪರ್ ವಶಪಡಿಸಿಕೊಳ್ಳಲಾಗಿದೆ. ಕಲ್ಲು ಗಣಿಗಾರಿಕೆ ನಿಲ್ಲಿಸಲಾಗಿದೆ.
'ನದಿಗೂ ಒದಗಿದೆ ಅಪಾಯ' ಶೀರ್ಷಿಕೆಯಡಿ ಭಾನುವಾರ 'ಪ್ರಜಾವಾಣಿ' ಒಳನೋಟದಲ್ಲಿ ವರದಿ ಪ್ರಕಟವಾಗಿತ್ತು. ವರದಿ ಆಧರಿಸಿ ತಹಶೀಲ್ದಾರ್ ಈ ಕ್ರಮ ಕೈಗೊಂಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.