ಸೋಮವಾರ, ಮೇ 16, 2022
21 °C

200 ರೌಡಿಶೀಟರ್‌ ಪೆರೇಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಇಲ್ಲಿನ ಪಟ್ಟಣ ಠಾಣೆಯಲ್ಲಿ ಭಾನುವಾರ ರೌಡಿಶೀಟರ್‌ಗಳ ಪೆರೇಡ್‌ ನಡೆಯಿತು.

ಮನೆ ಕಳ್ಳತನ, ಸರಗಳವು ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ 200ಕ್ಕೂ ಹೆಚ್ಚು ರೌಡಿಶೀಟರ್‌ಗಳು ಪೆರೇಡ್‌ನಲ್ಲಿ ಇದ್ದರು. ಡಿವೈಎಸ್ಪಿ ವಿ. ರಘುಕುಮಾರ, ‘ಯಾರು ಕೂಡ ಅಪರಾಧ ಪ್ರಕರಣದಲ್ಲಿ ಭಾಗಿಯಾಗಬಾರದು. ಒಂದುವೇಳೆ ಮತ್ತೆ ದುಷ್ಕೃಕೃತ್ಯ ಎಸಗಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಈ ಹಿಂದೆ ಎಸಗಿದ ಅಪರಾಧಕ್ಕೆ ಸಂಬಂಧಿಸಿದಂತೆ ಕೆಲವರು ಶಿಕ್ಷೆ ಎದುರಿಸಿದ್ದೀರಿ. ಕೆಲವರ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಹಿಂದೆ ಮಾಡಿದ ತಪ್ಪು ಮರುಕಳಿಸಬಾರದು. ಸಾಮರ್ಥ್ಯಕ್ಕೆ ತಕ್ಕುದಾದ ಕೆಲಸ ಮಾಡಿ ಸಮಾಜದಲ್ಲಿ ಜೀವನ ನಡೆಸಬೇಕು’ ಎಂದು ಹೇಳಿದರು.

ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ಶ್ರೀನಿವಾಸ ಮೇಟಿ, ಶ್ರೀನಿವಾಸ, ಜಯಪ್ರಕಾಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು