ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಉಲ್ಲಂಘನೆ; ನ್ಯಾಯಾಂಗ ಬಂಧನ

Last Updated 3 ಮೇ 2021, 16:05 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕೋವಿಡ್‌ ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಇಲ್ಲಿನ ಮೇನ್‌ ಬಜಾರ್‌ನಲ್ಲಿ ಫುಟ್‌ವೇರ್‌ ಅಂಗಡಿ ತೆರೆದಿದ್ದ ತಾಯಪ್ಪ (27) ಎಂಬುವರನ್ನು ಸೋಮವಾರ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

‘ಲಾಕ್‌ಡೌನ್‌ ಸಮಯದಲ್ಲಿ ದಿನಸಿ, ಔಷಧ ಮಳಿಗೆ ಹೊರತುಪಡಿಸಿದರೆ ಬೇರೆ ಅಂಗಡಿಗಳನ್ನು ತೆರೆಯಲು ಅವಕಾಶ ಇಲ್ಲ. ಆದರೆ, ನಿಯಮ ಉಲ್ಲಂಘಿಸಿ ಅಂಗಡಿ ತೆರೆದಿದ್ದ ತಾಯಪ್ಪ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ’ ಎಂದು ಪಟ್ಟಣ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ. ಶ್ರೀನಿವಾಸ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT