ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲೇಜು ದಾಖಲಾತಿಗೆ ನೂಕು ನುಗ್ಗಲು

Last Updated 6 ಸೆಪ್ಟೆಂಬರ್ 2021, 13:12 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ನಗರದ ಶಂಕರ್ ಆನಂದ್ ಸಿಂಗ್ ಕಾಲೇಜಿನಲ್ಲಿ ಸೋಮವಾರ ಪ್ರಥಮ ವರ್ಷದ ಪದವಿ ಪ್ರವೇಶಾತಿಗೆ ವಿದ್ಯಾರ್ಥಿಗಳ ನೂಕು ನುಗ್ಗಲು ಕಂಡು ಬಂತು. ಅಂತರ ಮರೆತು ನಿಂತಿದ್ದರು.

ಪದವಿ ಪ್ರಥಮ ವರ್ಷದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದಾಖಲಾತಿ ಪಡೆಯಲು ಅಭ್ಯರ್ಥಿಗಳು ಅಂತರ ಕಾಯ್ದುಕೊಳ್ಳದೆ ನಿಂತಿದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಜಗಡೆ ಕಾವ್ಯ, ವಿದ್ಯಾರ್ಥಿಗಳಿಗೆ ಟೋಕನ್ ಪದ್ಧತಿ ಮೂಲಕ ಪ್ರವೇಶ ನೀಡಬೇಕು. ವಿದ್ಯಾರ್ಥಿಗಳು ಸಾಲಾಗಿ ನಿಂತು ದಾಖಲಾತಿ ಪ್ರಕ್ರಿಯೆ ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ, ಕಾರ್ಯಕರ್ತರು, ಪ್ರಾಂಶುಪಾಲರ ವಿರುದ್ಧ ದಿಕ್ಕಾರ ಕೂಗಿದರು. ನಂತರ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳ ಮೂಲಕ ಟೋಕನ್ ನೀಡಿದರು. ಅದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು.

‘ದಾಖಲಾತಿಯ ಮೊದಲ ದಿನವಾದ ಕಾರಣ ಸಹಜವಾಗಿ ಹೆಚ್ಚಿನ ಅಭ್ಯರ್ಥಿಗಳು ಬಂದಿದ್ದರಿಂದ ಜನಸಂದಣಿ ಉಂಟಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ಮಾರ್ಗಸೂಚಿಯಂತೆ ದಾಖಲಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ’ ಎಂದು ಪ್ರಾಂಶುಪಾಲ ಬಿ.ಜಿ.ಕನಕೇಶಮೂರ್ತಿ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT