ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಸೇವಾ ದಳ ಕಾರ್ಯಕರ್ತೆಯರಿಗೆ ಸೀರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಕಾಂಗ್ರೆಸ್‌ ಸೇವಾ ದಳದ ಮಹಿಳಾ ಕಾರ್ಯಕರ್ತೆಯರಿಗೆ ಶುಕ್ರವಾರ ನಗರದ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಉಚಿತವಾಗಿ ಸೀರೆ ವಿತರಿಸಲಾಯಿತು.

ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಅವರು 50 ಕಾರ್ಯಕರ್ತೆಯರಿಗೆ ಸೀರೆ ವಿತರಿಸಿದರು. ‘ಪಕ್ಷ ಸಂಘಟನೆಯಲ್ಲಿ ಸೇವಾ ದಳದ ಕಾರ್ಯಕರ್ತರ ಪರಿಶ್ರಮ ಹೆಚ್ಚಿದೆ. ಎಲ್ಲರೂ ಒಗ್ಗಟ್ಟಿನಿಂದ ತಳಮಟ್ಟದಿಂದ ಪಕ್ಷ ಸಂಘಟನೆಗೆ ಕೆಲಸ ಮಾಡಬೇಕು. ರಾಜ್ಯ, ಕೇಂದ್ರದಲ್ಲಿ ಪುನಃ ಪಕ್ಷವನ್ನು ಅಧಿಕಾರಕ್ಕೆ ತರೋಣ’ ಎಂದು ನಿಯಾಜಿ ಹೇಳಿದರು.

ಸೇವಾ ದಳದ ಜಿಲ್ಲಾ ಅಧ್ಯಕ್ಷ ಬಿ.ಮಾರಣ್ಣ, ತಾಲ್ಲೂಕು ಅಧ್ಯಕ್ಷ ಪರಶುರಾಮ, ಸೋಮಪ್ಪ, ಆಲಂ ಭಾಷ, ನನ್ನಿಬೀ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.