ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ದಿನ ನಾಮಪತ್ರ ಇಲ್ಲ

Last Updated 12 ನವೆಂಬರ್ 2019, 16:33 IST
ಅಕ್ಷರ ಗಾತ್ರ

ಹೊಸಪೇಟೆ: ವಿಜಯನಗರ ಕ್ಷೇತ್ರದ ಉಪಚುನಾವಣೆಗೆ ಮಂಗಳವಾರ ಯಾರೊಬ್ಬರೂ ನಾಮಪತ್ರ ಸಲ್ಲಿಸಲಿಲ್ಲ.

ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಹೊರಬಿದ್ದ ಮೊದಲ ದಿನ ಸೋಮವಾರ ಜೆ.ಡಿ.ಎಸ್‌.ನಿಂದ ಎನ್‌.ಎಂ. ನಬಿ ನಾಮಪತ್ರ ಸಲ್ಲಿಸಿದ್ದರು. ಆದರೆ, ಎರಡನೇ ದಿನ ಯಾರೊಬ್ಬರೂ ಸಂಡೂರು ರಸ್ತೆಯ ಚುನಾವಣಾಧಿಕಾರಿ ಕಚೇರಿಯತ್ತ ಸುಳಿಯಲಿಲ್ಲ. ಚುನಾವಣಾ ಸಿಬ್ಬಂದಿ ಯಾವುದೇ ಕೆಲಸವಿಲ್ಲದೆ ಸುಮ್ಮನೆ ಕೂರುವಂತಾಯಿತು.

ನಾಮಪತ್ರ ಸಲ್ಲಿಸಲು ನ. 18 ಕೊನೆಯ ದಿನವಾಗಿದ್ದು, ಅನರ್ಹ ಶಾಸಕ ಆನಂದ್‌ ಸಿಂಗ್‌ ಅವರ ಅನರ್ಹತೆ ಪ್ರಕರಣ ಬುಧವಾರ (ನ. 13) ನ್ಯಾಯಾಲಯದಲ್ಲಿ ಇತ್ಯರ್ಥವಾಗಬೇಕಿದೆ. ಅದರ ಬಳಿಕ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಚುರುಕುಗೊಳ್ಳಬಹುದು.

ಉಪಚುನಾವಣೆಗೆ ಇದುವರೆಗೆ ಮೂವರು ನಾಮಪತ್ರ ಸಲ್ಲಿಸಿದಂತಾಗಿದೆ. ಸೆಪ್ಟೆಂಬರ್‌ನಲ್ಲಿ ಚುನಾವಣೆ ಘೋಷಣೆಯಾದಾಗ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಅವುಗಳನ್ನು ಸಹ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT