ಗುರುವಾರ , ಫೆಬ್ರವರಿ 25, 2021
27 °C

ವಾರದ ಅಂತರದೊಳಗೆ ಎರಡನೆಯ ಕೊಲೆ: ಮಲಗಿದ್ದ ವ್ಯಕ್ತಿ ತಲೆ ಮೇಲೆ ಕಲ್ಲು ಹಾಕಿ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ವಾರದ ಅಂತರದೊಳಗೆ ತಾಲ್ಲೂಕು ವ್ಯಾಪ್ತಿಯಲ್ಲಿ ಎರಡನೇ ಕೊಲೆಯಾಗಿದೆ.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಲಾರಿಯಲ್ಲಿ ಮಲಗಿದ್ದ ಚಾಲಕ ಚಿದಾನಂದ(40) ಎಂಬುವರ ತಲೆ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಲಾಗಿದೆ.

‘ಮರಿಯಮ್ಮನಹಳ್ಳಿವರಾದ ಚಿದಾನಂದ ಶನಿವಾರ ಎಪಿಎಂಸಿಯಲ್ಲಿ ಲೋಡ್‌ ಇಳಿಸಿ, ರಾತ್ರಿ ಅಲ್ಲಿಯೇ ಮಲಗಿದ್ದಾರೆ. ತಡರಾತ್ರಿ 3ರಿಂದ 4 ಗಂಟೆಯ ನಡುವೆ ಯಾರೊ ಅವರ ತಲೆಯ ಮೇಲೆ ಕಲ್ಲು ಹಾಕಿದ್ದಾರೆ. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಸಹೋದರ ಮಹಾಲಿಂಗ ಕೊಟ್ಟಿರುವ ದೂರಿನ ಮೇರೆಗೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ’ ಎಂದು ಟಿ.ಬಿ. ಡ್ಯಾಂ ಸಿಪಿಐ ಎ. ನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಜ. 9ರಂದು ತಾಲ್ಲೂಕಿನ ಕಾಳಘಟ್ಟದಲ್ಲಿ ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಆ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಕೊಲೆಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು