ಸೆ.೫ರಂದು ಅಭಿವ್ಯಕ್ತಿ ಹತ್ಯೆ ವಿರೋಧಿ ಸಪ್ತಾಹ

7

ಸೆ.೫ರಂದು ಅಭಿವ್ಯಕ್ತಿ ಹತ್ಯೆ ವಿರೋಧಿ ಸಪ್ತಾಹ

Published:
Updated:

ಬಳ್ಳಾರಿ: ಪತ್ರಕರ್ತೆ ಗೌರಿಲಂಕೇಶ್ ಮತ್ತು ಪ್ರೊ.ಎಂ.ಎಂ. ಕಲ್ಬುರ್ಗಿ ಹತ್ಯೆಯನ್ನು ವಿರೋಧಿಸಿ ಸೆ.5ರಂದು ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ ನಡೆಯಲಿದೆ ಎಂದು ಎನ್.ಡಿ.ವೆಂಕಮ್ಮ ತಿಳಿಸಿದರು.

ಗೌರಿ ಲಂಕೇಶ್ ಬಳಗ ಮತ್ತು ಗೌರಿ ಸ್ಮಾರಕ ಟ್ರಸ್ಟ್ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶದ ಅಂಗವಾಗಿ ಅಂದು ಬೆಳಿಗ್ಗೆ 8ಕ್ಕೆ ಗೌರಿ ಸಮಾಧಿ ಬಳಿ ಶ್ರದ್ಧಾಂಜಲಿ, 10.30ಕ್ಕೆ ಆನಂದ್ ರಾವ್ ವೃತ್ತ ಸಮೀಪದ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ಮತ್ತು ಮಧ್ಯಾಹ್ನ 2.30ಕ್ಕೆ ‌ಸಮಾವೇಶ ನಡೆಯಲಿದೆ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ. ವಿಚಾರವಾದಿಗಳ ಕೊಲೆ, ಮಾನವ ಹಕ್ಕುಗಳ ಹೋರಾಟಗಾರರನ್ನು ಬಂಧಿಸಿ ದನಿಯನ್ನು ಹತ್ತಿಕ್ಕಲಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

’ಶಾಸಕ ಜಿಗ್ನೇಶ್ ಮೇವಾನಿ, ಲೇಖಕರಾದ ಚಂದ್ರಶೇಖರ್ ಕಂಬಾರ್, ರಹಮತ್ ತರಕೇರೆ, ಬರಗೂರು ರಾಮಚಂದ್ರಪ್ಪ ಸಮಾವೇಶದಲ್ಲಿ ಭಾಗವಹಿಸಿ, ಉಗ್ರ ಹಿಂದೂವಾದ ಪ್ರತಿಪಾದನೆಯ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬುದೂ ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಲಿದ್ದಾರೆ’ ಎಂದರು.

ಮುಖಂಡರಾದ ಎ.ಕೆ.ಮಂಜಪ್ಪ, ಗೌರಿ ಬಳಗದ ಚೆನ್ನಮ್ಮ, ವಸಂತ್, ಮಲ್ಲಮ್ಮ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !