ಭಾನುವಾರ, ಜುಲೈ 25, 2021
28 °C

ಆಗಸ್ಟ್ ಅಂತ್ಯಕ್ಕೆ ಕೋವಿಡ್ ಉಲ್ಬಣ ಸಾಧ್ಯತೆ: ಸಚಿವ ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಜ್ವರ ಬಾಧಿತರೇ ರಾಜ್ಯದಲ್ಲಿ ಅತಿಹೆಚ್ಚು ಕೊರೊನಾ ಸೊಂಕಿಗೀಡಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಥ ಲಕ್ಷಣಗಳು ಇರುವವರನ್ನು ಪ್ರತ್ಯೇಕ ಮಾಡಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದ ವಿಮ್ಸ್‌ಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 60 ವರ್ಷ ಮೇಲ್ಪಟ್ಟವರ ಪ್ರಕರಣಗಳನ್ನು ಮೊದಲಿಗೆ ಪತ್ತೆಹಚ್ಚಿ ಪರೀಕ್ಷಿಸಲು ತಿಳಿಸಲಾಗಿದೆ. ಹವಾಮಾನ ಬದಲಾವಣೆಯಾಗಿ ಸಾಮಾನ್ಯವಾಗಿ ಕೆಮ್ಮು, ನೆಗಡಿ, ಜ್ವರದಿಂದ ಬಳಲುವವರು ಫೀವರ್ ಕ್ಲಿನಿಕ್‌ಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ 3 ಸಾವಿರಕ್ಕೂ‌ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಅವುಗಳಲ್ಲಿ ಶೇ 97ರಷ್ಟು ಜನರಿಗೆ ರೋಗ ಲಕ್ಷಣಗಳೇ ಇಲ್ಲ. ಆಗಸ್ಟ್ ಅಂತ್ಯಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಲಿವೆ‌ ಎಂಬ ಪರಿಣಿತರ ವರದಿ ಅನುಸಾರ ತಕ್ಕ‌ ಎಲ್ಲ‌ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ವಿಮ್ಸ್ ನಿರ್ದೇಶಕ ಡಾ.ಬಿ.ದೇವಾನಂದ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು