ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಮೀರಿ ಶುಲ್ಕ ವಸೂಲಿಗೆ ವಿರೋಧ

Last Updated 25 ಜೂನ್ 2019, 12:15 IST
ಅಕ್ಷರ ಗಾತ್ರ

ಹೊಸಪೇಟೆ: ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯ ಬಿ.ಎಡ್‌. ಕಾಲೇಜುಗಳು ನಿಯಮ ಮೀರಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌.ಎಫ್‌.ಐ.) ಆಗ್ರಹಿಸಿದೆ.

ಎಸ್‌.ಎಫ್‌.ಐ. ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಷಾ ಭವರಲಾಲ್‌ ಬಿ.ಎಡ್‌. ಕಾಲೇಜಿನ ಪ್ರಾಂಶುಪಾಲ ಎನ್‌. ವಿಶ್ವನಾಥಗೌಡ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

‘ಈಗಾಗಲೇ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆದಿರುವ ಕಾಲೇಜುಗಳವರು ಅದನ್ನು ಹಿಂತಿರುಗಿಸಬೇಕು. ವಿ.ವಿ. ನಿಗದಿಪಡಿಸಿರುವ ಶುಲ್ಕವಷ್ಟೇ ಪಡೆಯಬೇಕು. ನಿಯಮ ಉಲ್ಲಂಘಿಸುವ ಕಾಲೇಜುಗಳ ವಿರುದ್ಧ ವಿ.ವಿ. ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಎಸ್.ಎಫ್.ಐ. ಜಿಲ್ಲಾ ಅಧ್ಯಕ್ಷ ದೊಡ್ಡ ಬಸವರಾಜ, ತಾಲ್ಲೂಕು ಕಾರ್ಯದರ್ಶಿ ಜೆ. ಶಿವಕುಮಾರ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT