ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ ಶಿವಪ್ಪ ಆಯ್ಕೆ

Last Updated 18 ಜುಲೈ 2019, 19:44 IST
ಅಕ್ಷರ ಗಾತ್ರ

ಹೊಸಪೇಟೆ: ಡಣಾಪುರ ಕ್ಷೇತ್ರದ ಶಿವಪ್ಪ ಅವರು ತಾಲ್ಲೂಕು ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾದರು.

ಸದಸ್ಯ ಶಿವಮೂರ್ತಿ ಅವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ತೆರವಾದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಒಟ್ಟು 18 ಸದಸ್ಯರ ಪೈಕಿ ಶಿವಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಗೊಂಡರು.

‘ಶಿವಪ್ಪ ಅವರ ನಾಮಪತ್ರ ಕ್ರಮಬದ್ಧವಾಗಿದೆ. ಅವರನ್ನು ಹೊರತುಪಡಿಸಿ ಯಾರೊಬ್ಬರೂ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ’ ಎಂದು ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌ ಘೋಷಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜೋಗದ ನೀಲಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಷಣ್ಮುಖಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT