ಭಾನುವಾರ, ಜುಲೈ 3, 2022
22 °C
ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನದ ಸಮಾರೋಪದಲ್ಲಿ ಶೈಲಜಾ ಟೀಚರ್

ಕೇರಳದಲ್ಲಿ ಬಿಜೆಪಿ ತಳವೂರಲು ಬಿಡೆವು: ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ‘ಭಕ್ತಿಯ ಹೆಸರಿನಲ್ಲಿ ಜನರನ್ನು ವಂಚಿಸಿ ಹಲವೆಡೆ ಅಧಿಕಾರಕ್ಕೇರಿದ ಬಿಜೆಪಿ ಕೇರಳದಲ್ಲೂ ತಳವೂರಲು ಯತ್ನಿಸುತ್ತಿದೆ. ಸಿಪಿಎಂ ಅದಕ್ಕೆ ಅವಕಾಶ ಕೊಡುವುದಿಲ್ಲ’ ಎಂದು ಸಿಪಿಎಂ ಕೇಂದ್ರ ಸಮಿತಿ ಸದಸ್ಯೆಯಾಗಿರುವ ಕೇರಳದ ಶಾಸಕಿ ಶೈಲಚಾ ಟೀಚರ್ ಹೇಳಿದರು.

ಗುರುಪುರ ಕೈಕಂಬನದಲ್ಲಿ ನಡೆಯುತ್ತಿರುವ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ 23ನೇ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಹೆಸರಿಗೆ ಮಾತ್ರ ಬಿಜೆಪಿ ಸರ್ಕಾರ ಇದೆ. ಆಡಳಿತ ನಡೆಸುವುದು ಸಂಘ ಪರಿವಾರ. ಈ ಸಂಘ ಪರಿವಾರವು ಭಕ್ತಿಯ ಹೆಸರಲ್ಲಿ ಜನರನ್ನು ಮೋಸಮಾಡುತ್ತದೆ ಎಂದರು.

ರೈತರ ಹೋರಾಟವು ಕೇವಲ ನರೇಂದ್ರ ಮೋದಿಯ ವಿರುದ್ಧವಷ್ಟೇ ಅಲ್ಲ, ದೇಶದಲ್ಲಿ ಆಡಳಿತ ನಡೆಸುತ್ತಿರುವ ಕಾರ್ಪೊರೇಟ್ ಕಂಪನಿಗಳ ವಿರುದ್ಧವೂ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ರೈತರ ಅಭಿವೃದ್ಧಿ ಹೆಸರಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೊಳಿಸಿದರು. ಈ ಕಾಯ್ದೆಯನ್ನು ಸಮರ್ಥಿಸಿದ್ದ ಬಿಜೆಪಿ ಕಾರ್ಯಕರ್ತರು ಈಗ ಮೌನವಾಗಿದ್ದಾರೆ ಎಂದು ಟೀಕಿಸಿದರು.

ತುಳುನಾಡಿದ ಸಂಸ್ಕೃತಿಯಂತೆ ಶೈಲಜಾ ಟೀಚರ್‌ ತಲೆಗೆ ಮುಟ್ಟಾಳೆ ಇಟ್ಟು, ಫಲಕ ನೀಡಿ ಗೌರವಿಸಲಾಯಿತು. ಪಕ್ಷದ ಜಿಲ್ಲಾ ಮುಖಂಡ ವಸಂತ ಆಚಾರಿ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳದ ಸ್ವಾಗತ ಸಮಿತಿಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಸ್ವಾಗತಿಸಿದರು. ಪಕ್ಷದ ಮುಖಂಡರಾದ ಕೆ.ಎಸ್. ಶ್ರೀಯಾನ್, ಯು.ಬಿ. ಲೋಕಯ್ಯ, ಯಾದವ ಶೆಟ್ಟಿ, ಕೃಷ್ಣಪ್ಪಸಾಲ್ಯಾನ್, ಸದಾಶಿವ ದಾಸ್, ಪದ್ಮಾವತಿ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಾಸುದೇವ ಉಚ್ಚಿಲ್, ಮನೋಜ್ ವಾಮಂಜೂರು ಇದ್ದರು.

ಪೊಳಲಿ ದ್ವಾರದ ಬಳಿಯಿಂದ ಸಮ್ಮೇಳನದ ವೇದಿಕೆಯವರೆಗೆ ತಾಲೀಮು, ಹುಲಿವೇಷ ಕುಣಿತ, ಯಕ್ಷಗಾನ ವೇಷಗಳನ್ನು ಒಳಗೊಂಡ ಕಾರ್ಮಿಕರ ಮೆರವಣಿಗೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು