ಕಾಂಗ್ರೆಸ್ ಕಾರ್ಯಕರ್ತರಿಂದ ಸಿದ್ದರಾಮಯ್ಯ ಜನ್ಮದಿನ

7

ಕಾಂಗ್ರೆಸ್ ಕಾರ್ಯಕರ್ತರಿಂದ ಸಿದ್ದರಾಮಯ್ಯ ಜನ್ಮದಿನ

Published:
Updated:
Deccan Herald

ಹೊಸಪೇಟೆ: ಯುವ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ನಗರದಲ್ಲಿ ಮಾಜಿ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯನವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದರು.

ತಾಲ್ಲೂಕು ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಕೆ. ರವಿಕುಮಾರ ಅವರು ಪಟೇಲ್‌ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದ ಬಳಿ ಬೈಕ್‌ ರ್‍ಯಾಲಿಗೆ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ರ್‍ಯಾಲಿ ನಡೆಸಿದ ಕಾರ್ಯಕರ್ತರು, ಸಿದ್ದರಾಮಯ್ಯನವರ ಪರ ಘೋಷಣೆಗಳನ್ನು ಕೂಗಿದರು.

ನಂತರ ರೋಟರಿ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಸಿದ್ದರಾಮಯ್ಯನವರ ಬೃಹತ್‌ ಕಟೌಟ್‌ಗೆ ಹೂಮಾಲೆ ಹಾಕಿ ಜಯಘೋಷ ಹಾಕಿದರು. ನಂತರ ಕೇಕ್‌ ಕತ್ತರಿಸಿ, ಪರಸ್ಪರ ವಿನಿಮಯ ಮಾಡಿಕೊಂಡರು.

ಬಳಿಕ ಮಾತನಾಡಿದ ರವಿಕುಮಾರ, ‘ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರಿಗೆ ದೇವರು ಆಯುಷ್ಯ, ಆರೋಗ್ಯ ಕೊಡಬೇಕು. ಬರುವ ದಿನಗಳಲ್ಲಿ ಮತ್ತೆ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದು, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಶಕ್ತಿ ದೇವರು ನೀಡಬೇಕು’ ಎಂದು ಪ್ರಾರ್ಥಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !