ಗುರುವಾರ , ಸೆಪ್ಟೆಂಬರ್ 23, 2021
27 °C

ಫಲಾನುಭವಿಗಳಿಗೆ ನಿವೇಶನ ಕೊಡಿಸಿ: ಕಾರ್ಮಿಕರ ಸಂಘ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ನಗರದ ಜಂಬುನಾಥ ರಸ್ತೆಯ ಆಯಿಲ್‌ ಫ್ಯಾಕ್ಟರಿ ಹಿಂಭಾಗ 2005ರಲ್ಲಿ ಮಂಜೂರಾದ ನಿವೇಶನಗಳನ್ನು ನೈಜ ಫಲಾನುಭವಿಗಳಿಗೆ ಕೊಡಿಸಬೇಕು ಎಂದು ತಾಲ್ಲೂಕು ದ್ವಿಚಕ್ರ ವಾಹನ ರಿಪೇರಿ ಕಾರ್ಮಿಕರ ಸಂಘ ಆಗ್ರಹಿಸಿದೆ.

ಈ ಸಂಬಂಧ ಸಂಘದವರು ಸೋಮವಾರ ನಗರದಲ್ಲಿ ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಕಾರ್ಮಿಕರು, ನಿರ್ಗತಿಕರಿಗೆ 2005ರಲ್ಲಿ ಅಂದಿನ ಶಾಸಕ ಎಚ್‌.ಆರ್‌. ಗವಿಯಪ್ಪನವರು ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ ನಿವೇಶನಗಳನ್ನು ಮಂಜೂರು ಮಾಡಿಸಿದ್ದರು. 2012ರಲ್ಲಿ ಅಂದಿನ ಶಾಸಕ ಆನಂದ್‌ ಸಿಂಗ್‌ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ್ದರು. ಬಳಿಕ ನಗರಸಭೆಯು ನಿವೇಶನಗಳನ್ನು ಅಳತೆ ಮಾಡಿ, ಕಲ್ಲಿನ ಮೇಲೆ ನಿವೇಶನಗಳ ಸಂಖ್ಯೆ ಬರೆಸಿ, ಒಳಚರಂಡಿ ನಿರ್ಮಿಸಿತು. ಆದರೆ, ಈಗ ಕೆಲವರು ಆ ಬಂಡೆಗಳನ್ನು ಕಿತ್ತು ಹಾಕಿ, ಅಕ್ರಮವಾಗಿ ಅಲ್ಲಿ ವಾಸವಾಗಿದ್ದಾರೆ ಎಂದು ಮನವಿಯಲ್ಲಿ ದೂರಿದರು.

ಶೆಡ್‌ ಹಾಗೂ ತಾತ್ಕಾಲಿಕವಾಗಿ ಮನೆಗಳನ್ನು ನಿರ್ಮಿಸಿಕೊಳ್ಳುತ್ತಿದ್ದಾರೆ. ಕೂಡಲೇ ಅವರನ್ನು ತಡೆದು, ಪುನಃ ಸರ್ವೇ ನಡೆಸಿ, ನಿಜವಾದ ಫಲಾನುಭವಿಗಳಿಗೆ ನಿವೇಶನ ಕೊಡಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು