ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೈಪ್‌ಲೈನ್‌ ಕಾಮಗಾರಿ ಸ್ಥಗಿತ: ಬಿಟಿಪಿಎಸ್‌ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ವರದಿ ಪರಿಣಾಮ
Last Updated 28 ಅಕ್ಟೋಬರ್ 2020, 19:43 IST
ಅಕ್ಷರ ಗಾತ್ರ

ಹೊಸಪೇಟೆ: ಬಳ್ಳಾರಿ ಉಷ್ಣ ವಿದ್ಯುತ್‌ ಸ್ಥಾವರದಿಂದ (ಬಿಟಿಪಿಎಸ್‌) ತಾಲ್ಲೂಕಿನ ಕಮಲಾಪುರ, ನಲ್ಲಾಪುರ ಸಮೀಪ
ಕೈಗೆತ್ತಿಕೊಂಡಿರುವ ಪೈಪ್‌ಲೈನ್‌ ಕಾಮಗಾರಿ ಬುಧವಾರ ಸ್ಥಗಿತಗೊಂಡಿದೆ.

ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿರುವ ವರದಿ ನೋಡಿದೆ. ಬಳಿಕ ನನ್ನ ಸೂಚನೆ ಮೇರೆಗೆ, ರಾಜ್ಯ ಪುರಾತತ್ವ ಇಲಾಖೆಯ ಸಹಾಯಕ ಅಧಿಕಾರಿ ಮಂಜ ನಾಯ್ಕ, ಪಟ್ಟಣ ಪಂಚಾಯಿತಿ ಅಧಿಕಾರಿ ಎಚ್‌. ನಾಗೇಶ್‌, ಪ್ರಾಧಿಕಾರದ ಧನಂಜಯ, ಕಂದಾಯ ಇಲಾಖೆಯ ರವಿಚಂದ್ರ, ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಶಶಿಧರ್‌ ವೈ. ತಿಮ್ಮಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಟೆ ಗೋಡೆ ನಾಶಪಡಿಸಿರುವುದು ಗಮನಕ್ಕೆ ಬಂದಿದೆ. ಕಾಮಗಾರಿ ನಿಲ್ಲಿಸಲಾಗಿದೆ. ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿರುವ ಬಿಟಿಪಿಎಸ್‌ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಆಸಿಫ್‌ ತಿಳಿಸಿದ್ದಾರೆ.

ನಾರಾಯಣಪುರ ಜಲಾಶಯದಿಂದ ಕುಡಿತಿನಿಯ ಬಳ್ಳಾರಿ ಉಷ್ಣ ವಿದ್ಯುತ್‌ ಸ್ಥಾವರದವರೆಗೆ (ಬಿಟಿಪಿಎಸ್‌) ಕೈಗೆತ್ತಿಕೊಂಡಿದ್ದ ಪೈಪ್‌ಲೈನ್‌ ಕಾಮಗಾರಿ ಕುರಿತು ‘ಹೊಸಪೇಟೆ: ಬಿಟಿಪಿಎಸ್‌ ಪೈಪ್‌ಲೈನ್‌ ಕಾಮಗಾರಿಗೆ ಅಪಸ್ವರ’ ಶೀರ್ಷಿಕೆ ಅಡಿ ಬುಧವಾರ (ಅ.28) ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT