ಕೊಳೆಗೇರಿ ನಿವಾಸಿಗಳಿಂದ ಪ್ರತಿಭಟನೆ

ಮಂಗಳವಾರ, ಜೂಲೈ 23, 2019
25 °C

ಕೊಳೆಗೇರಿ ನಿವಾಸಿಗಳಿಂದ ಪ್ರತಿಭಟನೆ

Published:
Updated:
Prajavani

ಹೊಸಪೇಟೆ: ಕೊಳೆಗೇರಿಗಳಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಸ್ಲಂ ಜನಜಾಗೃತಿ ಆಂದೋಲನ ಸಮಿತಿ ಹಾಗೂ ಸಮಾನ ಮಕ್ಕಳ ಮಂಟಪ ಸಂಘಟನೆಯ ಕಾರ್ಯಕರ್ತರು ಮಂಗಳವಾರ ಇಲ್ಲಿನ ನಗರಸಭೆ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ನಗರಸಭೆ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.

‘ಎಲ್ಲ ಕೊಳೆಗೇರಿಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ಕೊಡಬೇಕು. ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್‌ ಮಾಡಬೇಕು. ಗಲೀಜಿನಿಂದ ಸಾಂಕ್ರಾಮಿಕ ರೋಗಗಳು ಹರಡಬಹುದು. ಅದಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲೆಡೆ ಬೀದಿ ದೀಪಗಳನ್ನು ಅಳವಡಿಸಬೇಕು. ಚರಂಡಿಗಳ ಸ್ವಚ್ಛತೆ ಕಾಲಕಾಲಕ್ಕೆ ಮಾಡಬೇಕು. ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು’ ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಸಂಘಟನೆಯ ಲಕ್ಷ್ಮಿ, ಎನ್‌. ನಾಗಮ್ಮ, ಶೇಕೆನ್‌ಬಿ, ರೇಣುಕಾ, ಸಮೀನಾ, ಕಾಜಲ್‌, ಶಮೀಮ್‌, ಕಾಸಿಂಬಿ, ರಜಿಯಾ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !