ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್‌ಕ್ಲಾಸ್‌ಗೆ ಚಾಲನೆ

Last Updated 26 ಸೆಪ್ಟೆಂಬರ್ 2019, 12:30 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ನೆಹರೂ ಕಾಲೊನಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಸ್ಮಾರ್ಟ್‌ಕ್ಲಾಸ್‌ಗೆ ಚಾಲನೆ ನೀಡಲಾಯಿತು.

ಎಂ.ಎಸ್‍.ಪಿ.ಎಲ್. ಸಮಾಜ ಸೇವಾ ವಿಭಾಗದ ಮುಖ್ಯಸ್ಥ ಎಚ್.ಕೆ.ರಮೇಶ ಮಾತನಾಡಿ, ‘ಕಂಪನಿಯಿಂದ ಸ್ಮಾರ್ಟ್‌ಕ್ಲಾಸ್‌ಗೆ ಅಗತ್ಯವಾದ ಸ್ಕ್ರೀನ್‌, ಸ್ಪೀಕರ್‌, ಕಂಪ್ಯೂಟರ್‌ ಮತ್ತು ಪ್ರಾಜೆಕ್ಟರ್‌ ಕೊಡಲಾಗಿದೆ. ಶಿಕ್ಷಣದ ಗುಣಮಟ್ಟ, ಆಧುನಿಕ ತಂತ್ರಜ್ಞಾನದ ಸಹಾಯದಿಂದ ಪರಿಣಾಮಕಾರಿ ಬೋಧನೆಗೆ ಅನುಕೂಲವಾಗಲಿದ್ದು, ಈ ನಿಟ್ಟಿನಲ್ಲಿ ಕಂಪನಿ ಶ್ರಮಿಸುತ್ತಿದೆ’ ಎಂದು ಹೇಳಿದರು.

‘ಪ್ರಸಕ್ತ ವರ್ಷ ಕಂಪನಿಯಿಂದ 20 ಶಾಲೆಗಳಲ್ಲಿ ಸ್ಮಾರ್ಟ್‌ಕ್ಲಾಸ್‌ ಸೌಲಭ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಮುಂದೆ ಬರಬೇಕು’ ಎಂದರು.

ಶಾಲೆಯ ಮುಖ್ಯಶಿಕ್ಷಕ ಅಯ್ಯಪ್ಪ, ‘ಸ್ಮಾರ್ಟ್‌ಕ್ಲಾಸ್‌ ನೆರವಿನಿಂದ ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಲು ಅನುಕೂಲವಾಗಲಿದೆ. ಇದರಿಂದ ಫಲಿತಾಂಶದಲ್ಲಿ ಸುಧಾರಣೆ ಕಾಣಬಹುದು’ ಎಂದರು.

ಎಂ.ಎಸ್.ಪಿ.ಎಲ್. ಸಂಸ್ಥೆಯ ಆಡಳಿತ ವಿಭಾಗದ ಪ್ರಧಾನ ವ್ಯವಸ್ಥಾಪಕ ಮೃತ್ಯುಂಜಯ, ಹಂಪಿನಕಟ್ಟೆ ಪ್ರೌಢಶಾಲೆಯ ಮುಖ್ಯಶಿಕ್ಷಕ ಓಬಯ್ಯ, ಸಮಾಜ ಸೇವಾ ವಿಭಾಗದ ಬಿ,ಎಂ, ನಾಗರಾಜ, ಶಿಕ್ಷಕರಾದ ಶೇಖರ್ ಗಿರಡ್ಡಿ, ಕೆ. ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT