ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ

7

ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ

Published:
Updated:
Deccan Herald

ಹೊಸಪೇಟೆ: ಇಲ್ಲಿನ ಮೆಹಬೂಬ್ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಬಗೆಹರಿಸುವಂತೆ ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿ.ವೈ.ಎಫ್‌.ಐ.) ನೇತೃತ್ವದಲ್ಲಿ ಸ್ಥಳೀಯರು ಸೋಮವಾರ ಪ್ರತಿಭಟನೆ ನಡೆಸಿದರು.

ಮೆಹಬೂಬ್‌ ನಗರದಿಂದ ಪ್ರಮುಖ ಮಾರ್ಗಗಳ ಮೂಲಕ ನಗರಸಭೆ ಕಚೇರಿ ವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದರು. ನಂತರ ಪೌರಾಯುಕ್ತ ವಿ. ರಮೇಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಡಾವಣೆಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಎಲ್ಲೆಡೆ ಸಿ.ಸಿ. ರಸ್ತೆ ಹಾಗೂ ಚರಂಡಿಗಳನ್ನು ನಿರ್ಮಿಸಬೇಕು. ವಾರದಲ್ಲಿ ಕನಿಷ್ಠ ಎರಡು ದಿನ ಫಾಗಿಂಗ್‌ ಮಾಡಬೇಕು. ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಸಲ್ಲಿಸಿದವರಿಗೆ ಹಣ ಬಿಡುಗಡೆ ಮಾಡಬೇಕು. ಬೀದಿ ದೀಪಗಳನ್ನು ಹಾಕುವುದು ಪ್ರಮುಖ ಬೇಡಿಕೆಗಳಾಗಿವೆ.

ಡಿ.ವೈ.ಎಫ್‌.ಐ. ತಾಲ್ಲೂಕು ಅಧ್ಯಕ್ಷ ಕಿನ್ನಾಳ ಹನುಮಂತ, ಕಾರ್ಯದರ್ಶಿ ಕಲ್ಯಾಣಯ್ಯ, ಖಜಾಂಚಿ ಈ. ಮಂಜುನಾಥ, ಮೆಹಬೂಬ್‌ ನಗರ ಘಟಕದ ಅಧ್ಯಕ್ಷೆ ಪದ್ಮಾ, ಕಾರ್ಯದರ್ಶಿ ಶಿಲ್ಪಾ ಸೇರಿದಂತೆ ಬಡಾವಣೆಯ ನಿವಾಸಿಗಳಿದ್ದರು.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !