ಶುಕ್ರವಾರ, ಏಪ್ರಿಲ್ 16, 2021
22 °C

‘ಶೀಘ್ರ ನೂತನ ಸಂಚಾರ ಮಾರ್ಗಸೂಚಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ(ವಿಜಯನಗರ): ‘ನಗರದಲ್ಲಿ ಸುಗಮ ವಾಹನ ಸಂಚಾರಕ್ಕಾಗಿ ಹೊಸ ಮಾರ್ಗಸೂಚಿ ಇಷ್ಟರಲ್ಲೇ ಹೊರಡಿಸಲಾಗುವುದು’ ಎಂದು ಡಿವೈಎಸ್ಪಿ ವಿ. ರಘುಕುಮಾರ ತಿಳಿಸಿದರು.

‘ಈಗಾಗಲೇ ಈ ಸಂಬಂಧ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ. ಸಮೀಕ್ಷೆ ಪೂರ್ಣಗೊಂಡ ನಂತರ ಕೆಲವು ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ, ಪಾರ್ಕಿಂಗ್‌ ನಿಯಮ ಜಾರಿಗೆ ತರಲಾಗುವುದು’ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

‘ನಗರ ವ್ಯಾಪ್ತಿಯಲ್ಲಿ 35 ಸಾವಿರ ದ್ವಿಚಕ್ರ, 15 ಸಾವಿರ ನಾಲ್ಕು ಚಕ್ರ ಹಾಗೂ 2 ಸಾವಿರ ಆಟೊ ರಿಕ್ಷಾಗಳಿವೆ. ವಿಜಯನಗರ ಜಿಲ್ಲೆ ಘೋಷಣೆ ಆಗಿರುವುದರಿಂದ ಬರುವ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ಭವಿಷ್ಯದಲ್ಲಿ ಸಂಚಾರ ಅಸ್ತವ್ಯಸ್ತವಾಗದಂತೆ ತಡೆಯುವುದಕ್ಕಾಗಿ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

‘ಸಂಚಾರ ವ್ಯವಸ್ಥೆಗೆ ಅಗತ್ಯವಿರುವ ಸಲಕರಣೆಗೆ ನಗರಸಭೆಯಿಂದ 45 ಲಕ್ಷ ಅನುದಾನ ಬಿಡುಗಡೆಯಾಗಿದೆ. ನಗರಸಭೆಯ ಸಹಕಾರದೊಂದಿಗೆ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ ಹಾಗೂ ಬಸ್ ನಿಲ್ದಾಣ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ಕೆಲ ಸಣ್ಣಪುಟ್ಟ ಬದಲಾವಣೆ ಮಾಡಲಾಗುವುದು’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.