ಮಣ್ಣೆತ್ತಿನ ಅಮವಾಸ್ಯೆ; ವಿಶೇಷ ಪೂಜೆ

ಶನಿವಾರ, ಜೂಲೈ 20, 2019
28 °C

ಮಣ್ಣೆತ್ತಿನ ಅಮವಾಸ್ಯೆ; ವಿಶೇಷ ಪೂಜೆ

Published:
Updated:
Prajavani

ಹೊಸಪೇಟೆ: ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತ ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ವಿರೂಪಾಕ್ಷೇಶ್ವರನಿಗೆ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವರಿಗೆ ಅಭಿಷೇಕ ಮಾಡಿ, ಹೂವಿನಿಂದ ಅಲಂಕರಿಸಿ, ಪೂಜೆ ಮಾಡಿ ಆರತಿ ಬೆಳಗಲಾಯಿತು. ವಿವಿಧ ಕಡೆಗಳಿಂದ ನೂರಾರು ಜನ ಬಂದು ದೇವರ ದರ್ಶನ ಪಡೆದರು. ಭಕ್ತರಿಗಾಗಿ ದೇವಸ್ಥಾನದಲ್ಲಿ ಅನ್ನ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ಬೈಲುವದ್ದಿಗೇರಿ, ಕಾಕುಬಾಳು, ವಡ್ಡರಹಳ್ಳಿ ಸೇರಿದಂತೆ ಹಲವೆಡೆ ಮಣ್ಣಿನ ಎತ್ತುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !