ಸೋಮವಾರ, ನವೆಂಬರ್ 18, 2019
25 °C
ಬಳ್ಳಾರಿ

‘ಸವದಿ ಬದಲು ರಾಮುಲುಗೆ ಉಸ್ತುವಾರಿ ಕೊಡಿ’–ಸೋಮಶೇಖರ ರೆಡ್ಡಿ

Published:
Updated:
ಸಚಿವ ಬಿ.ಶ್ರೀರಾಮುಲು

ಬಳ್ಳಾರಿ: ‘ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಬದಲು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಕೊಡಬೇಕು. ಹೀಗೆ ಮಾಡುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆ‘ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಸವದಿ ಅವರಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಅವರು ಮೂಲತಃ ಬೆಳಗಾವಿ ಜಿಲ್ಲೆಯವರಾಗಿರುವ ಕಾರಣ ಬಂದು ಹೋಗಲು ಆಗುತ್ತಿಲ್ಲ. ಸ್ಥಳೀಯರಾದ ಶ್ರೀರಾಮುಲು ಅವರಿಗೆ ಜಿಲ್ಲಾ ಉಸ್ತುವಾರಿ ಕೊಟ್ಟರೆ ಅಭಿವೃದ್ಧಿಗೆ ಅನುಕೂಲವಾಗುತ್ತದೆ’ ಎಂದರು.

ಪ್ರತಿಕ್ರಿಯಿಸಿ (+)