ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ವಾಣಿಜ್ಯ ಕೈಗಾರಿಕೆ ಸಂಸ್ಥೆಗಳ ರಾಜ್ಯಮಟ್ಟದ ಸಮ್ಮೇಳನ 8 ರಂದು

Last Updated 5 ಜೂನ್ 2019, 4:54 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲಾ ವಾಣಿಜ್ಯ ಕೈಗಾರಿಕೆ ಸಂಸ್ಥೆಗಳ ರಾಜ್ಯಮಟ್ಟದ ಸಮ್ಮೇಳನ ಜೂನ್ 8 ರಂದು ತೋರಣಗಲ್‌ನ ಜಿಂದಾಲ್ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಡಿ.ಎಲ್. ರಮೇಶ ಗೋಪಾಲ್ ತಿಳಿಸಿದರು.

ಸಂಸ್ಥೆಯಲ್ಲಿ‌ಬುಧವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ಸಹಯೋಗದಲ್ಲಿ‌ ನಡೆಯಲಿರುವ ಸಮ್ಮೇಳನದಲ್ಲಿ 28 ಜಿಲ್ಲೆಗಳ 300ಪ್ರತಿನಿಧಿಗಳು ಪಾಲ್ಗೊಳ್ಳುತ್ತಾರೆ . ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಸಮ್ಮೇಳನ ನಡೆಯುತ್ತಿರುವುದು ವಿಶೇಷ ಎಂದರು.

ಮುಖ್ಯಮಂತ್ರಿ ಎಚ್. ಡಿ ಕುಮಾರ ಸ್ವಾಮಿ ಉದ್ಘಾಟಿಸಲಿದ್ದಾರೆ. ರಾಜ್ಯ ಕೈಗಾರಿಕಾ ನೀತಿ, ಜಿಎಸ್ ಟಿ, ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಇರುವ‌ ಅವಕಾಶಗಳು, ಮಹಿಳಾ ಉದ್ದಿಮೆದಾರರು, ಬ್ಯಾಂಕಿಂಗ್ ಮತ್ತು ಫೈನಾನ್ಸ್ ಕುರಿತು ಗೋಷ್ಠಿಗಳು ನಡೆಯಲಿವೆ ಎಂದರು.

ಎಪಿಎಂಸಿ‌ ನಿರ್ದೇಶಕರು,ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಜಿಂದಾಲ್ ಗೆ ಭೂಮಿ ಮಾರಾಟ ಸರಿ

ಜಿಂದಾಲ್ ಗೆ ಭೂಮಿ ಮಾರಾಟ ಮಾಡುವ ಸರ್ಕಾರದ‌ ನಿರ್ಧಾರವನ್ನು ಸಂಸ್ಥೆ‌ ಸ್ವಾಗತಿಸುತ್ತದೆ ಎಂದು ಅವರು ಹೇಳಿದರು.

ಕೆಲವು ರಾಜಕೀಯ ಮುಖಂಡರು ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿರುವುದು‌ ವಿಷಾದನೀಯ. ಸರ್ಕಾರ ಭೂಮಿ ಮಾರಾಟ ಮಾಡದಿದ್ದರೆ, ಬಾಡಿಗೆ ಭೂಮಿಯಲ್ಲಿ ಜಿಂದಾಲ್ ಕಾರ್ಯನಿರ್ವಹಿಸಲು ಆಗುವುದಿಲ್ಲ. ಹಾಗಾದರೆ ಮುಚ್ಚಬೇಕಾದ ಪರಿಸ್ಥಿತಿ ಏರ್ಪಡುತ್ತದೆ ಎಂದರು.

ಸಂಸ್ಥೆಯ ನಿರ್ದೇಶಕರಾದ ಎನ್.ಯಶವಂತರಾಜ್, ಸಿ.ಶ್ರೀನಿವಾಸರಾವ್, ಗಾದೆಂ ಗೋಪಾಲಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT