ಮಂಗಳವಾರ, ಜೂನ್ 28, 2022
21 °C

27ರಿಂದ ಅಂಗವಿಕಲರ ಚೆಸ್‌ ಪಂದ್ಯಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ಸೇವಿಯರ್ ಅಂಗವಿಕಲರ ಸೇವಾ ಸಮಿತಿಯಿಂದ ಮೂರು ದಿನಗಳ ರಾಜ್ಯ ಮಟ್ಟದ ಅಂಗವಿಕಲರ ಚೆಸ್ ಪಂದ್ಯಾವಳಿ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘಟನೆಯ ಸಂಸ್ಥಾಪಕ ಕಾರ್ಯದರ್ಶಿ ಡಿ.ಎನ್‌.ಸಂತೋಷ್ ಕುಮಾರ್ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 27ರಂದು ಬೆಳಿಗ್ಗೆ 8ಕ್ಕೆ ನಗರದ ರೈತ ಭವನದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಚಾಲನೆ ನೀಡುವರು. ಸ್ಪರ್ಧೆಗೆ ರಾಜ್ಯದ 230 ಜನ ಕ್ರೀಡಾಪಟುಗಳು ಹೆಸರು ನೋಂದಣಿ ಮಾಡಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ಸಂಸ್ಥೆಯ ವತಿಯಿಂದ ಎರಡು ಅಂಧ ಜೋಡಿಗಳ ವಿವಾಹ, ಅಂಧ ಕಲಾವಿದರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮವೂ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಪಾಲ್ಗೊಳ್ಳುವರು ಎಂದು ತಿಳಿಸಿದರು. ಸಂಸ್ಥೆಯ ಕೈಲಾಶ್, ಅಬ್ದುಲ್ ನಬಿ, ಧರ್ಮರಾಜ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.