ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ ಮುಕ್ತ ಸಮಾಜದೆಡೆಗೆ ನಮ್ಮ ನಡಿಗೆಗೆ ಚಾಲನೆ

Last Updated 4 ಜನವರಿ 2020, 12:40 IST
ಅಕ್ಷರ ಗಾತ್ರ

ಹೊಸಪೇಟೆ: ಯುವಧ್ವನಿ ಯುವಜನರ ಒಕ್ಕೂಟದಿಂದ ಹಮ್ಮಿಕೊಂಡಿರುವ ‘ಕಸ ಮುಕ್ತ ಸಮಾಜದೆಡೆಗೆ ನಮ್ಮ ನಡೆ’ ಕಾರ್ಯಕ್ರಮಕ್ಕೆ ಶನಿವಾರ ಚಿತ್ತವಾಡ್ಗಿಯಲ್ಲಿ ಚಾಲನೆ ನೀಡಲಾಯಿತು.

ಅಸ್ವಚ್ಛತೆಯಿಂದ ನಗರ ಹಾಗೂ ತಾಲ್ಲೂಕಿನ ಸುತ್ತಮುತ್ತಲ ಹಳ್ಳಿಗಳಲ್ಲಿ ಜನರ ಆರೋಗ್ಯದ ಮೇಲಾಗುತ್ತಿರುವ ಪರಿಣಾಮದ ಕುರಿತು ಬೀದಿನಾಟಕದ ಮೂಲಕ ಜಾಗೃತಿ ಮೂಡಿಸಿದರು. ಪರಿಸರದ ಹಾಡುಗಳನ್ನು ಹಾಡಿದರು. ಸ್ಥಳೀಯರು ನಾಟಕ ನೋಡಿ, ಹಾಡು ಆಲಿಸಿ, ಚಪ್ಪಾಳೆ ಹೊಡೆದು ಪ್ರಶಂಸೆ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ‘ಯುವಧ್ವನಿ’ ತಂಡದ ಶಿವು, ‘ಕಸದಿಂದ ಜನರ ಆರೋಗ್ಯದ ಮೇಲೆ ಏನೆಲ್ಲ ಅಡ್ಡಪರಿಣಾಮಗಳು ಆಗುತ್ತಿವೆ ಎನ್ನುವುದನ್ನು ನ್ಯಾವ್ಯಾರೂ ಯೋಚನೆ ಮಾಡುತ್ತಿಲ್ಲ. ಅದರ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕು. ನಾವು ಉಸಿರಾಡುವ ಗಾಳಿ ವಿಷವಾಗದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

ಅಭಿಯಾನದಲ್ಲಿ ಚಿತ್ತವಾಡ್ಗಿ ವಿನೋಬಾ ಭಾವೆ ಶಾಲಯ ಮಕ್ಕಳು ಪಾಲ್ಗೊಂಡಿದ್ದರು. ಒಕ್ಕೂಟದ ಸುನೀತಾ, ನಸ್ರೀನ್ ಚಿತ್ತವಾಡ್ಗಿ, ಪದ್ಮಾ, ಲಕ್ಷ್ಮಿ, ಉದಯ್, ಸುನಿಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT