ಶುಕ್ರವಾರ, ಸೆಪ್ಟೆಂಬರ್ 17, 2021
31 °C
₹12 ಸಾವಿರ ಗೌರವ ಧನ ಖಾತರಿಗೆ ಆಗ್ರಹ

ಜುಲೈ 10 ರಿಂದ ಆರೋಗ್ಯ ಸೇವೆ ಸ್ಥಗಿತ: ಆಶಾ ಕಾರ್ಯಕರ್ತೆಯರ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಬೇಡಿಕೆಗಳನ್ನು ಈಡೇರಿಸದಿದ್ದರೆ ಜುಲೈ 10ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದರು.

ಜೂನ್ 30ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಆರೋಗ್ಯ ಸಚಿವ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಅವರೂ ಹೇಳಿದ್ದಾರೆ. ಆದರೆ, ಈವರೆಗೆ ನಮಗೆ ಮುಖ್ಯಮಂತ್ರಿಗಳ ಕಚೇರಿಯಿಂದಾಗಲಿ, ಯಾರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಜುಲೈ 10 ರಿಂದ ಅನಿರ್ದಿಷ್ಟವಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಮ್ಮ ಸೇವೆಗೆ ಕೇವಲ ಪ್ರಶಂಸೆಯೊಂದೇ ಬೇಡ, ಅದರಿಂದ ನಮ್ಮ ಹೊಟ್ಟೆ ತುಂಬುವುದಿಲ್ಲ. ನಮ್ಮ ಮೇಲೆ ನಿಜವಾದ ಗೌರವ ಇದ್ದರೆ, ಅಗತ್ಯ ಸೌಲಭ್ಯಗಳನ್ನು ನೀಡಿ, ₹12 ಸಾವಿರ ಗೌರವಧನ ಖಾತರಿಪಡಿಸಬೇಕು. ಸೂಕ್ತ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರವು ಗೌರವಧನ ₹3 ಸಾವಿರವನ್ನು ಎಲ್ಲರಿಗೂ ಕೊಟ್ಟಿಲ್ಲ. ಕೆಲವೆಡೆಗಳಲ್ಲಿ ಕೊಟ್ಟಿರುವ ಚೆಕ್ ಗಳು ಹಣವಿಲ್ಲದೆ ನಗದಾಗಿಲ್ಲ ಎಂದು ದೂರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು