ಉಚಿತ ಬಸ್‌ ಪಾಸ್‌ಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಬುಧವಾರ, ಜೂಲೈ 24, 2019
22 °C

ಉಚಿತ ಬಸ್‌ ಪಾಸ್‌ಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Published:
Updated:
Prajavani

ಹೊಸಪೇಟೆ: ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ (ಎ.ಬಿ.ವಿ.ಪಿ.) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ನಗರದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ಪ್ರಮುಖ ಬೀದಿಗಳಲ್ಲಿ ರ್‍ಯಾಲಿ ನಡೆಸಿದ ವಿದ್ಯಾರ್ಥಿಗಳು, ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್ಸಿ, ಎಸ್ಟಿ ಸೇರಿದಂತೆ ಇತರೆ ವರ್ಗದ ಎಲ್ಲ ಮಕ್ಕಳಿಗೆ ಉಚಿತವಾಗಿ ಬಸ್‌ ಪಾಸ್‌ ನೀಡಲಾಗುವುದು ಎಂದು ಸರ್ಕಾರಿ ಹೋದ ವರ್ಷದ ಬಜೆಟ್‌ನಲ್ಲಿ ಭರವಸೆ ನೀಡಿತ್ತು. ಆದರೆ, ಇದುವರಗೆ ಅದನ್ನು ಈಡೇರಿಸಿಲ್ಲ. ರಾಜ್ಯದಾದ್ಯಂತ ಬರಗಾಲದ ವಾತಾವರಣ ಇದೆ. ಖಾಸಗಿ ಶಾಲಾ–ಕಾಲೇಜುಗಳಲ್ಲಿ ಡೊನೋಷನ್‌ ಹಾವಳಿಯಿಂದ ವಿದ್ಯಾರ್ಥಿಗಳು ಸಮಸ್ಯೆಗೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್‌ ಪಾಸ್‌ ಕೊಟ್ಟರೆ ಅವರಿಗೆ ಅನುಕೂಲವಾಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಸರ್ಕಾರ ಕೇವಲ ಅಧಿಕಾರ ಉಳಿಸಿಕೊಳ್ಳುವುದಕ್ಕೆ ಸೀಮಿತವಾಗಬಾರದು. ಗ್ರಾಮೀಣ ಪ್ರದೇಶದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯ ಕಡೆಗೆ ಕಿವಿಗೊಡಬೇಕು ಎಂದು ಆಗ್ರಹಿಸಿದ್ದಾರೆ.

ಪರಿಷತ್ತಿನ ವಿಭಾಗೀಯ ಕಾರ್ಯದರ್ಶಿ ಗುರುರಾಜ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !