ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಬೆಂಬಲ

Last Updated 6 ಜನವರಿ 2019, 14:37 IST
ಅಕ್ಷರ ಗಾತ್ರ

ಬಳ್ಳಾರಿ:ಕೇಂದ್ರ ಸರ್ಕಾರದ ರೈತಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಜ.8, 9ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಮಿತಿಯ ಮುಖಂಡ ಎ.ದೇವದಾಸ್ ಹೇಳಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣವನ್ನು ವಿರೋಧಿಸಿ, ಸ್ವಾಮಿನಾಥನ್ ವರದಿ ಜಾರಿ, ಸಾಲ ಮನ್ನಾ ಒಳಗೊಂಡ ಋಣಮುಕ್ತ ಕಾಯ್ದೆ ಜಾರಿ ಹಾಗೂ ರೈತರ ಆತ್ಮಹತ್ಯೆ ತಡೆಗೆ ನೀತಿ ರಚಿಸಲುಒತ್ತಾಯಿಸಲಾಗುವುದು ಎಂದು ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಎರಡೂ ಕರ್ನಾಟಕ ರೈತ ಸಂಘಗಳು, ಕರ್ನಾಟಕ ಪ್ರಾಂತ ರೈತ ಸಂಘ,ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಅಖಿಲ ಭಾರತ ಕಿಸಾನ್ಸಭಾ, ರೈತ–ಕೃಷಿ ಕಾರ್ಮಿಕರ ಸಂಘಟನೆ, ಅಖಿಲ ಭಾರತ ಕಿಸಾನ್ ಮಜ್ದೂರ್, ಕಿಸಾನ್ ಸ್ವರಾಜ್ ಹಾಗೂಕರ್ನಾಟಕ ಜನಶಕ್ತಿ ಸಂಘಟನೆಗಳು ಒಟ್ಟಾಗಿ ರಚನೆಯಾಗಿರುವ ಎಐಕೆಎಸ್‌ಸಿಸಿ ಮುಷ್ಕರವನ್ನು ಬೆಂಬಲಿಸಲಿವೆ.

ವಿವಿಧ ರೈತ ಸಂಘಟನೆಗಳ ಮುಖಂಡರಾದ ವಿ.ಎಸ್.ಶಿವಶಂಕರ್, ಆರ್.ಮಾದವರೆಡ್ಡಿ, ಕ್ರಿಷ್ಣಪ್ಪ, ಈ.ಹನುಮಂತಪ್ಪ, ಗಾಳಿ ಬಸವರಾಜ್, ಲೇಪಾಕ್ಷಿ ಅಸುಂಡಿ, ಹನುಮಂತಪ್ಪ ಇದ್ದರು.

ಎಐಡಿಎಸ್‍ಓ ಬೆಂಬಲ:

ಕೇಂದ್ರಿಯ ಕಾರ್ಮಿಕ ಸಂಘಟನೆಗಳು ಹಾಗೂ ಕೈಗಾರಿಕಾ ಮತ್ತು ಸೇವಾ ಕ್ಷೇತ್ರದ ಉದ್ಯೋಗಿಗಳ ಸ್ವತಂತ್ರ ಒಕ್ಕೂಟಗಳು ಮುಷ್ಕರವನ್ನು ಎಐಡಿಎಸ್‍ಒ ಬೆಂಬಲಿಸಲಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT