ಹೊಸಪೇಟೆ (ವಿಜಯನಗರ): ‘ಮುಂಗಾರು ಹಂಗಾಮಿನಲ್ಲಿ ಕಳಪೆ ಬೀಜ, ರಸಗೊಬ್ಬರ ಮಾರಾಟ ಮಾಡುವ ಸಂಭವವಿದ್ದು, ಅದರ ಮೇಲೆ ತೀವ್ರ ನಿಗಾ ವಹಿಸಬೇಕು. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಅವರು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಬುಧವಾರ ನಡೆದ ಮುಂಗಾರು ಹಂಗಾಮಿನ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಬಿತ್ತನೆ ಸಮಯದಲ್ಲಿ ಬೀಜ ಹಾಗೂ ರಸಗೊಬ್ಬರ ಪೂರೈಕೆದಾರರು, ಮಾರಾಟಗಾರರು ಕಳಪೆ ಬೀಜ, ರಸಗೊಬ್ಬರಗಳನ್ನು ವಿತರಿಸಿ ರೈತರಿಗೆ ಮೋಸ ಮಾಡುವ ಸಾಧ್ಯತೆ ಇದೆ. ಅಧಿಕಾರಿಗಳು ವಿಚಕ್ಷಣ ದಳದ ಮೂಲಕ ದಿಢೀರ್ ದಾಳಿ ನಡೆಸಿ, ಪರಿಶೀಲಿಸಬೇಕು. ಕಲಬೆರಕೆ ಮತ್ತು ಕಳಪೆ ಸಾಮಗ್ರಿಗಳನ್ನು ಪೂರೈಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಬೆಳೆ ವಿಮೆಗೆ ಕುರಿತು ರೈತರಲ್ಲಿ ಹೆಚ್ಚಿನ ಅರಿವು ಮೂಡಿಸಿ, ನೋಂದಣಿ ಮಾಡಿಸಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಬ್ಯಾಂಕ್ ಮ್ಯಾನೇಜರ್ಗಳು, ಪ್ರಗತಿಪರ ರೈತರು, ರೈತ ಮುಖಂಡರುಗಳಿಗೆ ತರಬೇತಿ ಕಾರ್ಯಾಗಾರ ಏರ್ಪಡಿಸಿ ತಿಳಿವಳಿಕೆ ಮೂಡಿಸಬೇಕು. ಪ್ರಧಾನಮಂತ್ರಿ ಫಸಲ್ ವಿಮೆ ಯೋಜನೆ ಕುರಿತು ಆಕಾಶವಾಣಿಯಲ್ಲಿ ಫೋನ್-ಇನ್ ಕಾರ್ಯಕ್ರಮದ ಮೂಲಕ ರೈತರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.