ಸೋಮವಾರ, ಸೆಪ್ಟೆಂಬರ್ 16, 2019
22 °C

ಬಳಿಗಾರ ಜತೆ ಮೇ 7ರಂದು ಸಂವಾದ

Published:
Updated:

ಹೊಸಪೇಟೆ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಆವರೊಂದಿಗೆ ಮೇ 7ರಂದು ಸಂಜೆ 4.15ಕ್ಕೆ ನಗರದ ವಿಜಯನಗರ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

‘ಆಧುನಿಕ ಸಂದರ್ಭದಲ್ಲಿ ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳುವ ಬಗೆ’ ಕುರಿತು ಸಂವಾದ ಜರುಗಲಿದೆ. ಕಾಲೇಜಿನ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ಸಾಹಿತಿ ಮೃತ್ಯುಂಜಯ ರುಮಾಲೆ, ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಸಿದ್ದರಾಮ ಕಲ್ಮಠ, ತಾಲ್ಲೂಕು ಅಧ್ಯಕ್ಷ ಎತ್ನಳ್ಳಿ ಮಲ್ಲಯ್ಯ ಉಪಸ್ಥಿತರಿರುವರು. ಕರ್ಣಂ ವಾಸುದೇವ ಭಟ್‌ ಸಂಗೀತ ಗಾಯನ ಕಾರ್ಯಕ್ರಮ ನಡೆಸಿಕೊಡುವರು.

Post Comments (+)